ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ| 25 ಕೋಟಿ ಕಾರ್ಮಿಕರು ಭಾಗಿ ಸಾಧ್ಯತೆ
ನವದೆಹಲಿ(ನ.25): ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಬೆಂಗಳೂರು ಸೇರಿದಂತೆ ದೇಶದ ಹಲವು ಕಾರ್ಮಿಕ ಸಂಘಟನೆಗಳು ನ.26ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆಕೊಟ್ಟಿದೆ. ಇದರಲ್ಲಿ ವಿವಿಧ ಸಂಘಟನೆಗಳ 25 ಕೋಟಿ ಕಾರ್ಮಿಕರು ಭಾಗಿಯಾಗುವ ಸಾಧ್ಯತೆ ಇದ್ದು, ಆಟೋ ರಿಕ್ಷಾ, ಓಲಾ, ಊಬರ್ ಸೇರಿ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ನ. 26ಕ್ಕೆ ರಾಷ್ಟ್ರವ್ಯಾಪಿ ಕಾರ್ಮಿಕ ಮುಷ್ಕರ!
ಖಾಸಗಿ ಹಾಗೂ ಸರ್ಕಾರಿ ನೌಕಕರಿಗೆ, ಕೈಗಾರಿಕಾ ವಲಯದಲ್ಲಿ ದುಡಿಯುತ್ತಿರುವ ನೌಕರರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ನ.26ರ ಮುಷ್ಕರಕ್ಕೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದ್ದು, ಯಶ ಕಾಣಲಿದೆ ಎಂದು ಕಾರ್ಮಿಕ ಸಂಘಟನೆಗಳು ಜಂಟಿ ಹೇಳಿಕೆಯಲ್ಲಿ ವಿಶ್ವಾಸ ವ್ಯಕ್ತ ಪಡಿಸಿವೆ.
ಅಖಿಲ ಭಾರತೀಯ ವ್ಯಾಪಾರಿ ಕಾಂಗ್ರೆಸ್, ಹಿಂದ್ ಮಜ್ದೂರ್ ಸಭಾ, ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್, ಅಲ್ ಇಂಡಿಯಾ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಮುಂತಾದ ಪ್ರಮುಖ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಬಿಜೆಪಿ ಬೆಂಬಲಿತ ಭಾರತೀಯ ಮಜ್ದೂರ್ ಸಂಘ ಮುಷ್ಕರದಿಂದ ದೂರ ಉಳಿದಿದೆ.
ಭಾರತ್ ಬಂದ್: ಜಿಲ್ಲೆಗಳಲ್ಲಿ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ
ನರೇಗಾ ಯೋಜನೆಯಡಿ ಕೆಲಸದ ದಿನವನ್ನು 200ಕ್ಕೆ ಏರಿಸಬೇಕು, ನೌಕರರಿಗೆ ಪ್ರತಿ ತಿಂಗಳು 7500 ನಗದು ವರ್ಗಾವಣೆ, ಬಡ ಕುಟುಂಬಕ್ಕೆ ತಿಂಗಳಿಗೆ 10 ಕೇಜಿ ಅಕ್ಕಿ ವಿತರಣೆ ಹಾಗೂ ಹೊಸ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 25, 2020, 2:40 PM IST