* ಮಾಜಿ ಸಂಸದೆ ಸುಶ್ಮಿತಾ ದೇವ್‌ ಕಾಂಗ್ರೆಸ್‌ ತೊರೆದ ಬೆನ್ನಿಗೇ ಪಕ್ಷಕ್ಕೆ ಮತ್ತೊಂದು ಆಘಾತ * ಕಾಂಗ್ರೆಸ್‌ಗೆ ಬಿಗ್ ಶಾಕ್: ಮತ್ತೊಬ್ಬ ರಾಜ್ಯಾಧ್ಯಕ್ಷ ಟಿಎಂಸಿಗೆ?

ತ್ರಿಪುರಾ(ಆ.22): ಮಾಜಿ ಸಂಸದೆ ಸುಶ್ಮಿತಾ ದೇವ್‌ ಕಾಂಗ್ರೆಸ್‌ ತೊರೆದ ಬೆನ್ನಿಗೇ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತ್ರಿಪುರಾ ಕಾಂಗ್ರೆಸ್‌ ಅಧ್ಯಕ್ಷ ಪಿಜುಶ್‌ ಕಾಂತಿ ಬಿಸ್ವಾಸ್‌ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂರು ದಶಕಗಳ ಕಾಲ ಕಾಂಗ್ರಸ್‌ನಲ್ಲಿದ್ದ ಸುಶ್ಮಿತಾ ಅವರು ಕೆಲ ದಿನಗಳ ಹಿಂದಷ್ಟೇ ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್‌ ಸೇರಿದ್ದರು. ಅದರ ಬೆನ್ನಲ್ಲೇ ಬಿಸ್ವಾಸ್‌ ಅವರೂ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಮೂಲಗಳ ಪ್ರಕಾರ ಬಿಸ್ವಾಸ್‌ ಟಿಎಂಸಿ ಸೇರುವ ಸಾಧ್ಯತೆ ಇದೆ.

‘ತ್ರಿಪುರಾ ಕಾಂಗ್ರೆಸ್‌ ಅಧ್ಯಕ್ಷನಾಗಿದ್ದ ನನ್ನನ್ನು ಬೆಂಬಲಿಸಿದ ಎಲ್ಲಾ ಕಾರ್ಯಕರ್ತರು, ನಾಯಕರಿಗೂ ಧನ್ಯವಾದಗಳು. ಇಂದು ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹಾಗೂ ರಾಜಕೀಯಕ್ಕೆ ವಿದಾಯ ಹೇಳುತ್ತಿದ್ದೇನೆ. ಗೌರವಾನ್ವಿತ ಸೋನಿಯಾ ಗಾಂಧಿಗೆ ಕೃತಜ್ಞತೆಗಳು’ ಎಂದು ಬಿಸ್ವಾಸ್‌ ಟ್ವೀಟ್‌ ಮಾಡಿದ್ದಾರೆ.