ಅಮೆರಿಕದ ಮಾಜಿ ಅಧ್ಯಕ್ಷ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೊಂದು ಕೊಲೆ ಯತ್ನ ನಡೆದಿದೆ. ಫ್ಲೋರಿಡಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಎರಡು ತಿಂಗಳಿನಲ್ಲಿ ನಡೆದ ಎರಡನೇ ದಾಳಿ ಇದಾಗಿದೆ.

ವಾಷಿಂಗ್ಟನ್ (ಜು.16): ಅಮೆರಿಕದ ಮಾಜಿ ಅಧ್ಯಕ್ಷ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೊಂದು ಕೊಲೆ ಯತ್ನ ನಡೆದಿದೆ. ಫ್ಲೋರಿಡಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಎರಡು ತಿಂಗಳಿನಲ್ಲಿ ನಡೆದ ಎರಡನೇ ದಾಳಿ ಇದಾಗಿದೆ.

ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಪ್ರಚಾರ ನಡೆಸುವ ಸಂದರ್ಭದಲ್ಲಿ ಟ್ರಂಪ್‌ ಅವರು ಜನರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅದೇ ಸ್ಥಳದಲ್ಲಿ ಅನಾಮಿಕ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಯಾವ ಗುಂಡು ಸಹ ಟ್ರಂಪ್‌ ಅವರತ್ತ ಬರಲಿಲ್ಲ. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಲ್ಲಿನ ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಮೊದಲ 2 ನಗರಗಳ ನಡುವೆ ಸಂಪರ್ಕದ ವಂದೇ ಮೆಟ್ರೋ ರೈಲು ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ಎರಡು ತಿಂಗಳ ಹಿಂದೆ ದಾಳಿ: ಇದು

ಟ್ರಂಪ್ ಅವರ ಮೇಲಾಗುತ್ತಿರುವ ಎರಡನೇ ದಾಳಿ ಇದಾಗಿದೆ. ಜುಲೈನಲ್ಲಿ ಪೆನ್ಸಿಲ್ವೇನಿಯಾ ಪ್ರಾಂತ್ಯದಲ್ಲಿ ಚುನಾವಣೆ ಪ್ರಚಾರ ನಡೆಸುವ ವೇಳೆ ಅನಾಮಿಕ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು. ಅಂದು ಕೂದಲೆಳೆಯಲ್ಲಿ ಟ್ರಂಪ್ ಪಾರಾಗಿದ್ದರು. ಆದರೆ ಮತ್ತೊಂದು ಗುಂಡು ಅವರ ಬಲಗಿವಿಯನ್ನು ಸೀಳಿ ಘಾಸಿಗೊಳಿಸಿತ್ತು.

ಯಾವುದೇ ಪ್ರಾಣಹಾನಿಯಿಲ್ಲ: ಭಾನುವಾರ ನಡೆದ ದಾಳಿಯಿಂದಾಗಿ ಡೊನಾಲ್ಡ್ ಟ್ರಂಪ್ ಅವರಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಈ ದಾಳಿ ನಡೆಸಿದವರು, ಟ್ರಂಪ್ ಅವರನ್ನು ಗುರಿ ಮಾಡಿದ್ದರೋ ಅಥವಾ ಬೇರೆಡೆ ಗುರಿ ಇರಿಸಿದ್ದರೋ ಎಂದು ತಿಳಿದುಬಂದಿಲ್ಲ. ಇದರ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕಾ ರಾಜಕೀಯ: ಕಮಲಾ ಹ್ಯಾರಿಸ್ ಧರಿಸಿದ್ದ ಕಿವಿಯೊಲೆ ಬಗ್ಗೆಯೇ ಚರ್ಚೆ, ಬೆಲೆ ಎಷ್ಟು?

ಎಫ್‌ಬಿಐ ವೈಫಲ್ಯ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಎರಡನೇ ಬಾರಿಗೆ ದಾಳಿ ಯತ್ನ ನಡೆದಿರುವುದು ಅಲ್ಲಿನ ಎಫ್‌ಬಿಐ ತನಿಖಾ ಸಂಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಟ್ರಂಪ್ ಅವರ ಮೇಲೆ ನಡೆದ ಮೊದಲ ದಾಳಿಯಿಂದ ಎಫ್‌ ಬಿಐ ಪಾಠ ಕಲಿತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ.