370ನೇ ವಿಧಿ ರದ್ದಾಗಿ ಒಂದು ವರ್ಷ: ಜಮ್ಮು- ಕಾಶ್ಮೀರದಾದ್ಯಂತ ಕರ್ಫ್ಯೂ ಜಾರಿ!
370ನೇ ವಿಧಿ ರದ್ದಾಗಿ ಇಂದಿಗೆ ವರ್ಷ: ಕಾಶ್ಮೀರದಲ್ಲಿ ಕಟ್ಟೆಚ್ಚರ| ಮುಂಜಾಗ್ರತಾ ಕ್ರಮವಾಗಿ ಜಮ್ಮು- ಕಾಶ್ಮೀರದಾದ್ಯಂತ ಕಪ್ರ್ಯೂ ಜಾರಿ
ಶ್ರೀನಗರ(ಆ.05): ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಬುಧವಾರಕ್ಕೆ ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಾದ್ಯಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
370ನೇ ವಿಧಿ ರದ್ದನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿಗಳು ಹಾಗೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು ಆ.5ರಂದು ಕರಾಳ ದಿನ ಆಚರಣೆಗೆ ಕರೆ ನೀಡಿವೆ. ಅಲ್ಲದೇ ಕಾಶ್ಮೀರ ಕಣಿವೆಯಲ್ಲಿ 370ನೇ ವಿಧಿ ರದ್ದತಿಯ ವರ್ಷಾಚರಣೆಯವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ.
ಪೂರ್ತಿ ಕಾಶ್ಮೀರ ತನ್ನದೆನ್ನುವ ಪಾಕ್‌ನ ಭೂಪಟ ಬಿಡುಗಡೆ!
ಈ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆ.4 ಮತ್ತು 5ರಂದು ಕಪ್ರ್ಯೂ ಹೇರಲಾಗಿದೆ. ಇದೇ ವೇಳೆ ಮುಂಜಾಗೃತಾ ಕ್ರಮವಾಗಿ ಜಮ್ಮು ಕಾಶ್ಮೀರದಲ್ಲಿ ಆ.15ರ ವರೆಗೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಳೆದ ವರ್ಷ ಆ.5ರಂದು ಕೇಂದ್ರ ಸರ್ಕಾರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ಅಲ್ಲದೇ ಜಮ್ಮು- ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.