ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಉತ್ತರಾಖಂಡ್‌: ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮಸ್ಸೋರಿ ಡೆಹ್ರಾಡೂನ್ ಮಾರ್ಗಮಧ್ಯೆ ಈ ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. 

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಸ್ಸೋರಿ ಪೊಲೀಸರು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಈ ಬಸ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು 22 ಜನ ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಹಲವು ಆಂಬುಲೆನ್ಸ್‌ಗಳು ಧಾವಿಸಿದ್ದು, ಅಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೂ ಗಾಯಗಳಾಗಿವೆ. ಅವರಲ್ಲಿ ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Scroll to load tweet…

ಪ್ರಪಾತಕ್ಕೆ ಬಿದ್ದ ಶಬರಿಮಲೆ ಯಾತ್ರಿಗಳ ಬಸ್, 68 ಭಕ್ತರ ಪೈಕಿ ಹಲವರ ಸ್ಥಿತಿ ಗಂಭೀರ!

ಪವಿತ್ರ ಕ್ಷೇತ್ರ ಶಬರಿಮಲೆಗೆ ತೆರಳಿ ವಾಪಾಸ್ ಆಗುತ್ತಿದ್ದ ಯಾತ್ರಾರ್ಥಿಕರ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಕೇರಳದ ಪಣಂತಿಟ್ಟ ಜಿಲ್ಲೆಯ ನೀಲಕ್ಕಲ್ ಬಳಿ ಸಂಭವಿಸಿದೆ. 7 ಮಕ್ಕಳು ಸೇರಿದಂತೆ 68 ಶಬರಿಮಲೆ ಯಾತ್ರಾರ್ಥಿಕರನ್ನು ಹೊತ್ತ ಬಸ್ ತಮಿಳುನಾಡಿನಿಂದ ಶಬರಿಮಲೆ ಯಾತ್ರೆಗೆ ತೆರಳಿತ್ತು. (ಮಾ.28) ಮಧ್ಯಾಹ್ನ 1.15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪ್ರಪಾತಕ್ಕೆ ಬಿದ್ದಿದೆ. ಇದರ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆ ಸೇರಿಸುವಲ್ಲಿ ವಿಳಂಬವಾಗಿದೆ. ಹೀಗಾಗಿ ಹಲವರ ಆರೋಗ್ಯ ಸ್ಥಿತಿ ಚಿತಾಂಕಜನಕವಾಗಿದೆ.

68 ಯಾತ್ರಾರ್ಥಿಕರ ಪೈಕಿ 62 ಮಂದಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಬೆನ್ನಲ್ಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಆದರೆ ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೇ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸುವಲ್ಲಿ ವಿಳಂಭವಾಗಿದೆ. ಪಣಂತಿಟ್ಟ ಹಾಗೂ ಎರುಮಲೆ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಗಾಯಳುಗಳನ್ನು ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸಾರಿಗೆ ಸಂಸ್ಥೆ ಬಸ್-ಟ್ಯಾಂಕರ್ ನಡುವೆ ಭೀಕರ ಅಪಘಾತ, 27 ಮಂದಿ ಗಂಭೀರ!

ತೀವ್ರವಾಗಿ ಗಾಯಗೊಂಡಿರುವ 20 ಮಂದಿಯನ್ನು ಕೋಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳಕ್ಕೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪವಿತ್ರ ಕ್ಷೇತ್ರ ಸಂದರ್ಶಿಸಿ ಮರಳಿ ಬರುವಾಗ ಈ ಘಟನೆ ಸಂಭವಿಸಿದೆ. ಮಾರ್ಚ್ 26 ರಂದು ಶಬರಿಮಲೆ ಕ್ಷೇತ್ರದ ಬಾಗಿಲು ಭಕ್ತರಿಗೆ ತೆರೆದಿದೆ. ಉತ್ತರಂ ಉತ್ಸವ ಹಿನ್ನಲೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದಾರೆ. 

ತಮಿಳುನಾಡಿನಿಂದ 68 ಮಂದಿ ಶಬರಿಮಲೆ ಮಾಲೆ ಧರಿಸಿ, ವೃತ ಸ್ವೀಕರಿಸಿ ಕ್ಷೇತ್ರಕ್ಕೆ ತೆರಳಿದ್ದರು. ಯಾವುದೇ ಅಡೆ ತಡೆ ಇಲ್ಲದೇ ಶಬರಿಮಲೆ ಯಾತ್ರೆ ಮುಗಿಸಿದ ಯಾತ್ರಾರ್ಥಿಕರು ಹಿಂತಿರುಗುವ ವೇಳೆ ಈ ಘಟನೆ ಸಂಭವಿಸಿದೆ. ಆ್ಯಂಬುಲೆನ್ಸ್ ಸೇವೆ ವ್ಯತ್ಯಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಕ್ನಿಕ್ ಮುಗಿಸಿ ಮರಳುತ್ತಿದ್ದ ಕಾಲೇಜು ಬಸ್ ಅಪಘಾತ, ವಿದ್ಯುತ್ ಕಂಬಕ್ಕೆ ಡಿಕ್ಕಾಯಾಗಿ ಪಲ್ಟಿ!