Asianet Suvarna News Asianet Suvarna News
breaking news image

ಪೋಷಕರೇ ಎಚ್ಚರ, ಚಲಿಸುತ್ತಿದ್ದ ಶಾಲಾ ವಾಹನದಿಂದ ಹೊರಬಿದ್ದ ವಿದ್ಯಾರ್ಥಿನಿಯರಿಗೆ ಗಾಯ!

ಮಕ್ಕಳು ಶಾಲಾ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾರಾ? ಶಾಲಾ ವಾಹನದ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು. ಚಾಲಕನ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಶಾಲಾವಾಹನದ ಡೋರ್ ತೆರೆದುಕೊಂಡು ವಿದ್ಯಾರ್ಥಿನಿಯರಿಬ್ಬರು ಕೆಳಕ್ಕೆ ಬಿದ್ದ ಗಾಯಗೊಂಡಿದ್ದಾರೆ. ಸಿಸಿಟಿವಿ ವಿಡಿಯೋ ಎಲ್ಲಾ ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದೆ.

Two school girls injured after falls out from moving van Vadodara cctv video ckm
Author
First Published Jun 22, 2024, 8:19 AM IST

ವಡೋದರ(ಜೂ.22) ಅಧಿಕೃತವಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಅಪಾಯಕ್ಕೆ ಎಡೆ ಮಾಡಿಕೊಡಲಿದೆ. ಇಂತಹ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ತುಂಬಲಾಗುತ್ತದೆ. ಸುರಕ್ಷತೆ ಬಗ್ಗೆ ನಿರ್ಲಕ್ಷ್ಯವಹಿಸಲಾಗುತ್ತದೆ. ಇದೀಗ ಚಾಲಕನ ನಿರ್ಲಕ್ಷ್ಯಕ್ಕೆ ಚಲಿಸುತ್ತಿದ್ದ ಶಾಲಾ ವಾಹನದ ಡೋರ್ ತೆರೆದುಕೊಂಡು ಇಬ್ಬರು ವಿದ್ಯಾರ್ಥಿನಿಯರು ಹೊರಬಿದ್ದ ಘಟನೆ ಗುಜರಾತ್‌ನ ವಡೋದರಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಅದೃಷ್ಠವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾರುತಿ ಇಕೋ ವಾಹನದಲ್ಲಿ ಮಕ್ಕಳನ್ನು ತುಂಬಿಕೊಂಡ ಚಾಲಕ ಶಾಲೆಯತ್ತ ವೇಗವಾಗಿ ತೆರಳಿದ್ದಾನೆ. ಈ ವೇಳೆ ಕಾರಿನ ಹಿಂಬಾಗದ ಡೋರ್ ತೆರೆದುಕೊಂಡಿದೆ. ಕಾರು ವೇಗವಾಗಿ ಚಲಿಸಿದರೆ ಡೋರ್ ತೆರೆದುಕೊಂಡು ಹಿಂಭಾಗದಲ್ಲಿ ಕುಳಿತಿದ್ದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಬಿದ್ದಿದ್ದಾರೆ. ವೇಗಾಗಿ ರಸ್ತೆಗೆ ಬಿದ್ದು ಕೆಲ ದೂರಕ್ಕೆ ಚಿಮ್ಮಿದ್ದಾರೆ. ಇದರಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದೃಷ್ಠವಶಾತ್ ಹಿಂಬದಿಯಲ್ಲಿ ಯಾವುದೇ ವಾಹನ ಇರಲಿಲ್ಲ. ಇಷ್ಟೇ ಅಲ್ಲ ಶಾಲಾ ವಾಹನದ ಚಕ್ರಕ್ಕೆ ಸಿಲುಕಿಕೊಳ್ಳದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದರೆ.

ವಿಜಯಪುರದಲ್ಲಿ ಉಕ್ಕಿ ಹರಿಯೋ ಹಳ್ಳ: ಶಿಕ್ಷಣಕ್ಕಾಗಿ ಪ್ರಾಣವನ್ನೆ ಪಣಕ್ಕಿಡ್ತಿದ್ದಾರೆ ಇಂಗಳನಾಳ ಮಕ್ಕಳು!

ಇಬ್ಬರು ವಿದ್ಯಾರ್ಥಿನಿಯರ ಬಹುತೇಕ ಭಾಗದಲ್ಲಿ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಇತ್ತ ಚಾಲಕ ನೇರವಾಗಿ ಹೊರಟು ಹೋಗಿದ್ದಾನೆ. ಕಾರಿನ ಡೋರ್ ತೆರೆದುಕೊಂಡು ಮಕ್ಕಳು ಬಿದ್ದಿರುವುದು ತಿಳಿದರೂ ಚಾಲಕ ಮಾತ್ರ ವೇಗವಾಗಿ ಕಾರು ಚಲಾಯಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

 

 

ಮಾಹಿತಿ ತಿಳಿದ ಪೋಷಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಇತ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಬಳಿಕ ಚಾಲಕನ ಬಂಧಿಸಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಅನ್ನೋದು ಪ್ರಾಥಮಿಕೆ ತನಿಖೆಯಿಂದ ಬಹಿರಂಗವಾಗಿದೆ.

ಈ ಘಟನೆ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗಿ ಅಧಿಕೃತ ಹಾಗೂ ನೋಂದಾಯಿತ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಕಳುಹಿಸಬೇಕು.  ಕಡಿಮೆ ಹಣಕ್ಕೆ ಹಲವು ಅನಧಿಕೃತ ಶಾಲಾ ವಾಹನಗಳು ಸುರಕ್ಷತೆಗೆ ಹೆಚ್ಚಿನ ಗಮನ ನೀಡುವುದಿಲ್ಲ. 

ಮಧ್ಯಾಹ್ನದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!

Latest Videos
Follow Us:
Download App:
  • android
  • ios