ಹಿಮಾಚಲ ಪ್ರದೇಶದ ಶಿಮ್ಲಾ ಹಾಗೂ ಮಧ್ಯಪ್ರದೇಶದ ತಿಕಮ್ಗರ್‌ನಲ್ಲಿ ನಡೆದ ಎರಡು ಪ್ರತ್ಯೇಕ ಕಾರು ಅಪಘಾತಗಳಲ್ಲಿ  ಒಟ್ಟು 9 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಶಿಮ್ಯಾ/ ಭೋಪಾಲ್‌: ಹಿಮಾಚಲ ಪ್ರದೇಶದ ಶಿಮ್ಲಾ ಹಾಗೂ ಮಧ್ಯಪ್ರದೇಶದ ತಿಕಮ್ಗರ್‌ನಲ್ಲಿ ನಡೆದ ಎರಡು ಪ್ರತ್ಯೇಕ ಕಾರು ಅಪಘಾತಗಳಲ್ಲಿ ಒಟ್ಟು 9 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚೌಪಾಲ್ ತೆಹ್ಸಿಲ್‌ನ ನೆರ್ವಾದಲ್ಲಿ ಈ ಅವಘಡ ಸಂಭವಿಸಿದೆ.

ಐವರು ಪ್ರಯಾಣಿಸುತ್ತಿದ್ದ ಕಾರು ನೆರ್ವಾಕ್ಕೆ ಆಗಮಿಸುತ್ತಿದ್ದಾಗ ಇನ್ನೇನು ನೆರ್ವಾ ತಲುಪಲು 5 ಕಿಲೋ ಮೀಟರ್ ದೂರ ಇರುವಾಗ ಪ್ರಪಾತಕ್ಕೆ ಉರುಳಿ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಶಿಮ್ಲಾ ಎಸ್‌ಪಿ (Shimla SP) ಸಂಜೀವ್ ಗಾಂಧಿ (Sanjeev Gandhi) ಹೇಳಿದ್ದಾರೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಬದುಕುಳಿದ್ದ ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಕಿರುಸೇತುವೆಗೆ ಕಾರು ಡಿಕ್ಕಿ: ನಾಲ್ವರು ದುರಂತ ಸಾವು

ಇನ್ನೊಂದೆಡೆ ಮಧ್ಯಪ್ರದೇಶದ (Madhya Pradesh) ತಿಕಮ್‌ಗರ್‌ನಲ್ಲಿ (Tikamgarh) ಮರವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಿಕಮ್‌ಗರ್‌ನ ಜತಾರ ರಸ್ತೆಯಲ್ಲಿ (Jatara Road) ಈ ಅವಘಡ ಸಂಭವಿಸಿದೆ. 

ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅತೀ ವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು, ಮೀತಿ ಮೀರಿದ ವೇಗದಲ್ಲಿ ಬರುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಮವೈ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಸಂತ್ರಸ್ತರ ಮೃತದೇಹಗಳನ್ನು ತಿಕಮ್‌ಗರ್‌ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಾಫ್ಟ್‌ವೇರ್‌ ದಂಪತಿಯ ದುರಂತ ಅಂತ್ಯ: ಮದುವೆಗೆ ಹೊರಟಿದ್ದವರು ಮಸಣ ಸೇರಿದರು