ಲಖನೌ[ಮಾ.08]: ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಶನಿವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರು. ನೀಡುವುದಾಗಿ ಘೋಷಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಆದ ಬಳಿಕ ಉದ್ಧವ್‌ ಠಾಕ್ರೆ ಅಯೋಧ್ಯೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಇದೇ ವೇಳೆ ಬಿಜೆಪಿಗೆ ತಿರುಗೇಟು ನೀಡಿರುವ ಉದ್ಧವ್‌ ಠಾಕ್ರೆ, ತಮ್ಮ ಪಕ್ಷ ಬಿಜೆಪಿಯಿಂದ ಬೇರ್ಪಟ್ಟಿದೆ. ಆದರೆ, ಹಿಂದುತ್ವದಿಂದ ಅಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಉದ್ಧವ್‌ ಭೇಟಿಯ ವೇಳೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮೂವರು ಹಿಂದು ಸಾಧುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ