Asianet Suvarna News Asianet Suvarna News

ಅಧಿಕಾರ ಸ್ವೀಕರಿಸುತ್ತಿದ್ದಂತೇ ಪ್ರಮುಖ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ!

ಕೊನೆಗೂ ಅಂತ್ಯಗೊಂಡ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ| ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಅಸ್ತಿತ್ವಕ್ಕೆ| ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಪ್ರಮಾಣವಚನ| ಸಾಮ್ನಾ ಸಂಪಾದಕೀಯ ಹುದ್ದೆಗೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ| ಸಾಮ್ನಾದ ನೂತನ ಸಂಪಾದಕರಾಗಿ ಸಂಜಯ್ ರಾವುತ್ ಅಧಿಕಾರ ಸ್ವೀಕಾರ| 

Uddhav Thackeray Quits As Saamana Editor
Author
Bengaluru, First Published Nov 28, 2019, 8:45 PM IST

ಮುಂಬೈ(ನ.28): ತಿಂಗಳಿಗೂ ಹೆಚ್ಚಿನ ಕಾಲದ ಹಗ್ಗ ಜಗ್ಗಾಟದ ಬಳಿಕ, ಕೊನೆಗೂ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಸರ್ಕಾರವೊಂದು ಅಸ್ತಿತ್ವಕ್ಕೆ ಬಂದಿದೆ.

ಮುಂಬೈನ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್’ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

‘ಮಹಾ’ದಲ್ಲಿ ಉದ್ಧವ್ ದರ್ಬಾರ್: ಅಸ್ತಿತ್ವಕ್ಕೆ ಬಂತು ಅಘಾಡಿ ಸರ್ಕಾರ್!

ಮಹಾರಾಷ್ಟ್ರದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ತಮ್ಮ ಪಕ್ಷದ ಮುಖವಾಣಿ ಸಾಮ್ನಾ ಪತ್ರಿಕೆ ಸಂಪಾದಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ರಾವತ್ ಸಾಮ್ನಾದ ನೂತನ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

59 ವರ್ಷದ ಉದ್ಧವ್ ಠಾಕ್ರೆ, ಮನೋಹರ್ ಜೋಶಿ ಮತ್ತು ನಾರಾಯಣ ರಾಣೆ ನಂತರ ಶಿವಸೇನೆಯಿಂದ ಮಹಾರಾಷ್ಟ್ರದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಿಎಂ ಉದ್ಧವ್ ಠಾಕ್ರೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವಿಟ್!

ಠಾಕ್ರೆ ಕುಟುಂಬದಿಂದ ಉದ್ಧವ್ ಠಾಕ್ರೆ ಮೊದಲ ಮುಖ್ಯಮಂತ್ರಿಯಾಗಿದ್ದು, ಶಿವಾಜಿ ಪಾರ್ಕ್‌ನಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow Us:
Download App:
  • android
  • ios