'ಉದಯನಿಧಿ ವಿರುದ್ಧ ದ್ವೇಷಭಾಷಣ ಕೇಸ್ ಯಾಕಿಲ್ಲ' ಸಿಜೆಐಗೆ ಪತ್ರ ಬರೆದ ಭಾರತದ 262 ಗಣ್ಯ ವ್ಯಕ್ತಿಗಳು!
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಹಾಗೂ ಸಿಎಂ ಎಂಕೆ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಯಾಕೆ ಸುಮೋಟೋ ದ್ವೇಷ ಭಾಷಣದ ಕೇಸ್ ಹಾಕಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೇಶದ 262 ಗಣ್ಯರು ಪತ್ರ ಬರೆದಿದ್ದಾರೆ.
ನವದೆಹಲಿ (ಸೆ.5): ಸನಾತನ ಧರ್ಮ ಡೆಂಘೆ, ಮಲೇರಿಯಾ ಇದ್ದ ರೀತಿ. ಇದನ್ನು ವಿರೋಧಿಸುವುದು ಮಾತ್ರವಲ್ಲ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ಗೆ ಈ ಹೇಳಿಕೆ ಇನ್ನಷ್ಟು ಉರುಳಾಗುವುದು ಖಚಿತವಾಗಿದೆ. ದ್ವೇಷ ಭಾಷಣ ಮಾಡಿದ ಎಂಕೆ ಸ್ಟ್ಯಾಲಿನ್ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಈವರೆಗೂ ಯಾಕೆ ಸುಮೋಟೋ ದ್ವೇಷ ಭಾಷಣದ ಕೇಸ್ ಯಾಕಾಗಿ ದಾಖಲು ಮಾಡಲಾಗಿಲ್ಲ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ದೇಶದ 262 ಗಣ್ಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲಿಯೇ ಸ್ಟ್ಯಾಲಿನ್ ತಾನು ನೀಡಿರುವ ಹೇಳಿಕೆಯ ಬಗ್ಗೆ ಕ್ಷಮೆ ಕೇಳುವ ಮಾತೇ ಇಲ್ಲ ಎಂದಿದ್ದಾರೆ. ನ್ಯಾಯಮೂರ್ತಿ ಎಸ್‌ಎನ್ ಧಿಂಗ್ರಾ ಮತ್ತು ನಿವೃತ್ತ ಐಎಎಸ್ ಗೋಪಾಲ್ ಕೃಷ್ಣ ಸೇರಿದಂತೆ 260 ಗಣ್ಯ ವ್ಯಕ್ತಿಗಳು ಸಹಿ ಮಾಡಿದ್ದು ಇದರಲ್ಲಿ 14 ನ್ಯಾಯಾಧೀಶರು, 130 ನಿವೃತ್ತ ಐಎಎಸ್ ಅಧಿಕಾರಿಗಳು, 20 ರಾಯಭಾರಿಗಳು, 118 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು ಇದ್ದಾರೆ. ದ್ವೇಷದ ಭಾಷಣದ ಸುಮೋಟೋ ಅರಿಯಲು ಸಿಜೆಐಗೆ ಮನವಿ ಮಾಡಿದ್ದಾರೆ.
ಉದಯನಿಧಿ ಸ್ಟ್ಯಾಲಿನ್ ಟೀಕೆಯನ್ನು ಹಿಟ್ಲರ್ ಮಾತಿಗೆ ಹೋಲಿಸಿದ ಬಿಜೆಪಿ!
ಭಾನುವಾರ ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಡಿಎಂಕೆ ನಾಯಕ ಸನಾತನ ಧರ್ಮವನ್ನು ಕಾಯಿಲೆಗೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಈ ಕುರಿತಾಗಿ ದೇಶದ 262 ಗಣ್ಯ ವ್ಯಕ್ತಿಗಳು ಸಿಜೆಐಗೆ ಪತ್ರ ಬರೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ, ಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು, "ಉದಯನಿಧಿ ಸ್ಟಾಲಿನ್ ಅವರು ಕೋಮು ಸೌಹಾರ್ದತೆ ಮತ್ತು ಮತೀಯ ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಭಾಷಣವನ್ನು ಸ್ವಯಂಪ್ರೇರಿತವಾಗಿ ಅರಿಯಬೇಕು" ಎಂದು ಒತ್ತಾಯ ಮಾಡಿದ್ದಾರೆ.
ನಾನು ಮತ್ತೆ ಮತ್ತೆ ಅದನ್ನೇ ಹೇಳುವೆ; ಸನಾತನ ಧರ್ಮ ನಿರ್ಮೂಲನೆ ಆಗಬೇಕೆಂಬ ಹೇಳಿಕೆ ಬದಲಿಲ್ಲ: ಉದಯನಿಧಿ ಸಮರ್ಥನೆ