ರಾಜ್ಯದಲ್ಲಿ ಯುಗಾದಿ ಸಂಭ್ರಮ| ಕೊರೋನಾ ಭೀತಿ ನಡುವೆಯೂ ಭಕ್ತಿಯಿಂದ ಹಬ್ಬದಾಚರಣೆ| ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ(ಏ.13): ರಾಜ್ಯದಲ್ಲಿ ಚಾಂದ್ರಮಾನ ಯುಗಾದಿ ಸಂಭ್ರಮ ಮನೆ ಮಾಡಿದೆ. ಕೋವಿಡ್ ನಡುವೆಯೂ ಜನರು ಭಕ್ತಿ ಭಾವದಿಂದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಯುಗಾದಿಯ ಶುಭಾಶಯ ಕೋರಿದ್ದಾರೆ.

ಈ ಮಧ್ಯೆ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಶುಭಾಷಯವನ್ನು ತಿಳಿಸಿದ್ದಾರೆ. ಈ ಸಂಬಂಧ ಕನ್ನಡದಲ್ಲೇ ಪ್ರಧಾನಿಯವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ತಿಳಿಸಿದ್ದು, ‘ನಿಮ್ಮೆಲ್ಲರಿಗೂ ಯುಗಾದಿಯ ಶುಭಾಶಯಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ.’ ಎಂದು ಮೋದಿ ಹಾರೈಸಿದ್ದಾರೆ.

Scroll to load tweet…

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಷಯ ಸಲ್ಲಿಸಿದ್ದು, ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಯುಗಾದಿ ಹಬ್ಬದ ಈ ಸಮಯದಲ್ಲಿ ಕರ್ನಾಟಕದ ನಮ್ಮ ಸಹೋದರ, ಸಹೋದರಿಯರಿಗೆ ಹಾಗೂ ವಿಶ್ವದೆಲ್ಲೆಡೆ ಇರುವ ಕನ್ನಡಿಗರಿಗೆ ಶುಭಾಶಯಗಳು ಮತ್ತು ಶುಭಹಾರೈಕೆಗಳು. ಈ ಶುಭ ಸಂದರ್ಭವು ಎಲ್ಲರಿಗೂ ಒಳ್ಳೆಯ ಆರೋಗ್ಯ, ನೆಮ್ಮದಿ ಹಾಗು ಸಮೃದ್ಧತೆ ತರಲಿ’ ಎಂದು ಹಾರೈಸಿದ್ದಾರೆ.

Scroll to load tweet…

ಶುಭ ಕೋರಿದ ಸಿಎಂ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲಾ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದಿದ್ದಾರೆ.