Asianet Suvarna News Asianet Suvarna News

ಉತ್ತರ ಪ್ರದೇಶ ಮದರಸಾ ಕಾಯ್ದೆ ರದ್ದು ಅಸಾಂವಿಧಾನಿಕ ಎಂದ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಆದೇಶಕ್ಕೆ ತಡೆ!

ಕಳೆದ ತಿಂಗಳು, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಮದರ್ಸಾ ಕಾಯ್ದೆಯು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು.
 

unconstitutional says Supreme Court for UP Madarsa Act pauses High Court order san
Author
First Published Apr 5, 2024, 2:02 PM IST


ನವದೆಹಲಿ (ಏ.5): ಉತ್ತರ ಪ್ರದೇಶದ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆಹಿಡಿದಿದೆ. ಮದರಸಾದಲ್ಲಿ ಕಲಿಯುತ್ತಿರುವ 17 ಲಕ್ಷ ವಿದ್ಯಾರ್ಥಿಗಳು ಹಾಗೂ 10 ಸಾವಿರ ಶಿಕ್ಷಕರನ್ನು ರಾಜ್ಯ ಶಿಕ್ಷಣ ವ್ಯವಸ್ಥೆಯೊಳಗೆ ಸೇರಿಸಿಕೊಳ್ಳಬೇಕು ಎನ್ನುವ  ಅಲಹಾಬಾದ್ ಹೈಕೋರ್ಟ್ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ತೀರ್ಪು  ತಡೆಹಿಡಿದಿದೆ.  ಕಳೆದ ತಿಂಗಳು, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್, 2004 ಅನ್ನು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಿತು. ಔಪಚಾರಿಕ ಶಾಲಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿತ್ತು.

'ಘರ್‌ ಮೆ ಗುಸ್‌ ಕೆ ಮಾರೇಂಗೆ..' ಮೋದಿ ಹೇಳಿದ್ದನ್ನು ನಿಜ ಮಾಡಿತಾ ಭಾರತದ RAW?

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಈ ಕುರಿತಾಗಿ  ನೋಟಿಸ್ ಜಾರಿ ಮಾಡಿದೆ. "ಮದರಸಾ ಮಂಡಳಿಯ ಉದ್ದೇಶವು ನಿಯಂತ್ರಕ ಸ್ವರೂಪದ್ದಾಗಿದೆ ಮತ್ತು ಅಲಹಾಬಾದ್ ಹೈಕೋರ್ಟ್ ಹೇಳಿದಂತೆ ಮದರಸಾ ಮಂಡಳಿಯು ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ ಎಂಬುದು ಪ್ರಾಥಮಿಕವಾಗಿ ಸರಿಯಾಗಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಾಲಮನ್ನಾ, ಹೆಣ್ಮಕ್ಕಳಿಗೆ ದುಡ್ಡು, ಜಾತಿ ಗಣತಿ, 25 ಲಕ್ಷ ಆರೋಗ್ಯ ವಿಮೆ..ಕಾಂಗ್ರೆಸ್‌ ಪ್ರಣಾಳಿಕೆಯ 10 ಪ್ರಮುಖ ಅಂಶಗಳು!

Follow Us:
Download App:
  • android
  • ios