ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ  ಬುಧವಾರ ನಡೆದಿದೆ. 

ಮಿಜೋರಾಂ (ಆ.23): ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬುಧವಾರ ನಡೆದಿದೆ. ಐಜ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿ ಈ ಘಟನೆ ನಡೆದಿದ್ದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದಾಗ 35-40 ಕಾರ್ಮಿಕರು ಸ್ಥಳದಲ್ಲಿಯೇ ಇದ್ದುದರಿಂದ ಇನ್ನೂ ಹಲವರು ಅವಶೇಷಗಳ ಅಡಿ ಸ್ಥಳದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಈಶಾನ್ಯ ಗಡಿ ರೈಲ್ವೆಯ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಎನ್‌ಎಫ್ ರೈಲ್ವೇಸ್‌ನ ಸಿಪಿಆರ್‌ಒ ಸಬ್ಯಸಾಚಿ ಡಿ ತಿಳಿಸಿದ್ದಾರೆ.

ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಇದುವರೆಗೆ ಹದಿನೇಳು ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೆ ಪಾಕ್‌ ಮೇಲೆ ಭಾರತದಿಂದ ಸರ್ಜಿಕಲ್‌ ಸ್ಟ್ರೈಕ್ ಸಂಚಲನ, ರಕ್ಷಣಾ ಇಲಾಖೆ ಸ್ಪಷ್ಟನೆ ಏನು?

ಪಿಎಂ ಮೋದಿ ಸಂತಾಪ: ಮಿಜೋರಾಂನಲ್ಲಿ ಸೇತುವೆ ಅವಘಡದಿಂದ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಎಕ್ಸ್ ಗ್ರೇಷಿಯಾ ರೂ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ ಸಂಬಂಧಿಕರಿಗೆ ನೀಡಲಾಗುತ್ತದೆ. ರೂ. ಗಾಯಗೊಂಡವರಿಗೆ 50,000 ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ರತನ್‌ ಟಾಟಾಗೆ ಮಾಯಾ ಟಾಟಾ ಉತ್ತರಾಧಿಕಾರಿ?, ಟಾಟಾ ಸಮೂಹಕ್ಕೆ ಮಹಿಳಾ ಅಧಿಪತ್ಯ

ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದು ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದಾರೆ. ರಕ್ಷಣೆ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಎಲ್ಲಾ ಮೃತರ ಕುಟುಂಬಗಳಿಗೆ ನಾನು ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆಗಳು ಎಂದು ಮಿಜೋರಾಂ ಸಿಎಂ ಜೋರಮ್ತಂಗ ಟ್ವೀಟ್ ಮಾಡಿದ್ದಾರೆ.

Scroll to load tweet…

Scroll to load tweet…