Asianet Suvarna News Asianet Suvarna News

ಮುಸ್ಲಿಂರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್ ಅಖ್ತರ್

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಖ್ಯಾತ ಸಾಹಿತಿ ಜಾವೇದ್ ಅಖ್ತರ್ ಬೆಂಬಲ ಘೋಷಿಸಿದ್ದಾರೆ. ಆದರೆ ಇದೇ ವೇಳೆ ಮುಸ್ಲಿಮರಿಗಿರುವ ಬಹುಪತ್ನಿತ್ವ ಅವಕಾಶ ನೋಡಿ ಕೆಲವರು ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದು ಹಾಸ್ಯ ಧಾಟಿಯಲ್ಲಿ ಹೇಳಿದ್ದಾರೆ. 

Uniform Civil Code People are jealous of Muslims right of polygamy jokes Javed Akhtar gvd
Author
First Published Mar 20, 2024, 9:44 AM IST

ನವದೆಹಲಿ (ಮಾ.20): ಏಕರೂಪ ನಾಗರಿಕ ಸಂಹಿತೆ ಜಾರಿಗೆ ಖ್ಯಾತ ಸಾಹಿತಿ ಜಾವೇದ್ ಅಖ್ತರ್ ಬೆಂಬಲ ಘೋಷಿಸಿದ್ದಾರೆ. ಆದರೆ ಇದೇ ವೇಳೆ ಮುಸ್ಲಿಮರಿಗಿರುವ ಬಹುಪತ್ನಿತ್ವ ಅವಕಾಶ ನೋಡಿ ಕೆಲವರು ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದು ಹಾಸ್ಯ ಧಾಟಿಯಲ್ಲಿ ಹೇಳಿದ್ದಾರೆ. ಹಿಂದೂಗಳು ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ, ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತರಾಖಂಡ ಸರ್ಕಾರ ದೇಶದಲ್ಲೇ ಮೊದಲು ಸಂಹಿತೆ ಜಾರಿಗೊಳಿಸಿದೆ.

ಏಕರೂಪ ನಾಗರಿಕ ಸಂಹಿತೆ: ರಾಜ್ಯದ ಮುಸ್ಲಿಮರು ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. 

ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದವಾಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು. 

ಭವಿಷ್ಯದ ಯುದ್ಧಕ್ಕೆ ಎಸ್ಟಿಇಎಜಿ ಎಂಬ ಸೇನಾ ಸಂಶೋಧನಾ ಘಟಕ ಆರಂಭಿಸಿದ ಭಾರತೀಯ ಸೇನೆ!

ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ. ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು.   

Follow Us:
Download App:
  • android
  • ios