ಅಂಧಭಕ್ತರ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ, ದಕ್ಷಿಣದ ರಾಜ್ಯಗಳಿಗೆ ಮಲತಾಯಿ ಧೋರಣೆ: ಬಿ.ಕೆ. ಹರಿಪ್ರಸಾದ್

ದೇಶದಲ್ಲಿ ಅಂಧ ಭಕ್ತರಿರುವ ರಾಜ್ಯಗಳಿಗೆ ಮಾತ್ರ ಹೆಚ್ಚು ಅನುದಾನ ಕೊಡಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಮಾತ್ರ ಮಲತಾಯಿ ಧೋರಣೆ ಮಾಡಲಾಗುತ್ತಿದೆ. 

Union Budget More grants to North states step motherly attitude to south states B K Hariprasad sat

ಬೆಂಗಳೂರು (ಫೆ.05): ದೇಶದಲ್ಲಿ ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡುವ ಮೂಲಕ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ದಕ್ಷಿಣ ಭಾರತದವರು ಅಂಧ ಭಕ್ತರಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಹಣ ಹೇಗೆ ವಿಕೇಂದ್ರಿಕರಣಗೊಳ್ಳಬೇಕು ಎಂದು ಫೈನಾನ್ಸ್‌ ಕಮಿಷನ್ ನಿರ್ಧರಿಸುತ್ತದೆ. ಈಶಾನ್ಯ ರಾಜ್ಯಗಳಿಗೆ ಅನುದಾನದ ಕೊರತೆ ಇದೆ. ಅವರಿಗೆ ಆರ್ಥಿಕ ಸಹಾಯ ಮಾಡುವುದು ನ್ಯಾಯವಾಗಿದೆ. ಆದರೆ, ಉತ್ತರ ಭಾರತದ ಕೆಲವು ರಾಜ್ಯಗಳು ರೋಗಗ್ರಸ್ತ್ರ ರಾಜ್ಯಗಳಾಗಿವೆ. ಉತ್ಪಾದನೆ, ಉದ್ಯೋಗ ಸೃಷ್ಟಿ ಮಾಡಿದ್ದರೆ ಈ ರೀತಿಯ ಸಮಸ್ಯೆ ಬರುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುರೇಶ್ ಮಾತನಾಡಿದ್ದಾರೆ ಅದನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿಗೆ 400+ ಸ್ಥಾನ ಬರುತ್ತೆಂಬ ಸತ್ಯ ಖರ್ಗೆ ಬಾಯಲ್ಲಿ ಬಂದಿದೆ: ವಿಜಯೇಂದ್ರ

ಈ ದೇಶವನ್ನು ಒಡೆಯುತ್ತಿರುವುದು ಬಿಜೆಪಿ. ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡುವ ಮೂಲಕ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ದಕ್ಷಿಣ ಭಾರತದವರು ಅಂಧ ಭಕ್ತರಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಬಿಜೆಪಿಯವರು ತ್ರಿವರ್ಣ ಧ್ವಜ, ಸಂವಿಧಾನ, ಜಾತ್ಯತೀತ ತತ್ವದ ವಿರೋಧಿಗಳು ಆಗಿದ್ದಾರೆ. ಈ ಎಲ್ಲ ತತ್ವಗಳ ವಿರುದ್ಧ ಮಾತನಾಡುವ ಇವರಿಗೆ ದೇಶದ ಬಗ್ಗೆ ಮಾತನಾಡುವ ಹಕ್ಕಿಲ್ಲ. ಒನ್ ನೇಷನ್ ಒನ್ ರೇಷನ್ ನಿಂದ ಹಿಡಿದು ಎಲ್ಲ ಒಂದೇ ಮಾಡಲಾಗುತ್ತಿದೆ. ನಮ್ಮ ಭಾಷೆಗೆ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ‌ ಮೊದಲ ಬಾರಿಗೆ ಇಂತಹ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಲು ಬರ್ತಿದ್ದಾರೆ. ಭಾರತದಲ್ಲಿ ಗುಜರಾತ್ ಒಂದು ರಾಜ್ಯ, ಆದರೆ ಭಾರತ ಅಂದ್ರೆ ಗುಜುರಾತ್ ಅನ್ನೊ ಹಾಗಾಗಿದೆ. ದೇಶದಲ್ಲಿ ಗುಜರಾತ್‌ಗೆ ಮಾತ್ರ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಕ್ರಿಕೆಟ್ ನಿಂದ ಹಿಡಿದು ಕಡ್ಲೆಕಾಯಿ ಮಾರುವ ವಿಚಾರದಲ್ಲೂ ಗುಜುರಾತ್‌ಗೆ ಆದ್ಯತೆ ನೀಡಿದರೆ, ಬಾಕಿ ರಾಜ್ಯಗಳು ದನ ಮೇಯಿಸಲು ಬಂದಿವೆಯಾ? ಗುಜರಾತ್ ಮಾಡೆಲ್ ಅಂದ್ರೆ ಪಂಗನಾಮ ಹಾಕುವುದು ಅಂತಾನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರ ದೇಗುಲಗಳ ಮಹತ್ವ ಅರಿಯಲಿಲ್ಲ, ತಮ್ಮ ಸಂಸ್ಕೃತಿ ಬಗ್ಗೆ ತಾವೇ ನಾಚಿಕೆ ಪಡುತ್ತಿದ್ದರು: ಮೋದಿ

ರಾಮ ಮಂದಿರಾ ಧಾರ್ಮಿಕ ಕಾರ್ಯಕ್ರಮ, ಅಲ್ಲ ರಾಜಕೀಯ ಕಾರ್ಯಕ್ರಮವಾಗಿದೆ. ಕೊಟ್ಯಾಂತರ ರೂಪಾಯಿ ಖರ್ಚು ಮಾಡಿ ಮೋದಿ ಮತ್ತು ದೇವಸ್ಥಾನ ತೋರಿಸಿದರು. ಬಡತನ ಸಮಸ್ಯೆ, ಮಣಿಪುರ ಸಂಘರ್ಷ, ಅತ್ಯಚಾರ ಯಾವುದನ್ನು ತೋರಿಸಲಿಲ್ಲ. ಜನರ ತೆರಿಗೆ ದುಡ್ಡನ್ನು ತೊರ್ಪಡಿಕೆ ಖರ್ಚು ಮಾಡಿದೆ. ಮತ ಬ್ಯಾಂಕ್ ಧ್ರೃವಿಕರಣ ಮಾಡಲು ಮಾಡಿದ ಇದೊಂದು ರಾಜಕೀಯ ಕಾರ್ಯಕ್ರಮವಾಗಿದೆ ಎಂದು ಕೇಂದ್ರ ಸರ್ಕಾರರದ ವಿರುದ್ಧ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios