ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅವಮಾನ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971ಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಈ ಹೊಸ ಕಾನೂನಿನ ಅಡಿಯಲ್ಲಿ, ವಂದೇ ಮಾತರಂಗೆ ಅಡ್ಡಿಪಡಿಸಿದರೆ, ಅಪಮಾನಿಸಿದರೆ ರಾಷ್ಟ್ರಗೀತೆಗೆ ಸಮಾನವಾಗಿ ಜೈಲುಶಿಕ್ಷೆ 

ನವದೆಹಲಿ (ಮೇ.7): ರಾಷ್ಟ್ರೀಯ ಗೀತೆ ವಂದೇ ಮಾತರಂ ಅನ್ನು ಅಪಮಾನಿಸಿದರೆ ಅಥವಾ ಅಡ್ಡಿ ಮಾಡಿದರೆ ಜೈಲುಶಿಕ್ಷೆ ವಿಧಿಸಬಹುದಾದ ಮಹತ್ವದ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಸಂಫುಟ ಅನುಮೋದನೆ, ಶೀಘ್ರ ಕಾನೂನು

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971ಕ್ಕೆ ತಿದ್ದುಪಡಿ ಮಾಡಲು ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿಯಿಂದ ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಇರುವಂತಹ ಸಮಾನ ಸ್ಥಾನಮಾನ ‘ವಂದೇ ಮಾತರಂ’ಗೂ ದೊರೆಯಲಿದೆ. ಈಗಿನ ಕಾನೂನಿನ ಪ್ರಕಾರ ರಾಷ್ಟ್ರಗೀತೆಗೆ ಅಡ್ಡಿಪಡಿಸಿದರೆ ಅಥವಾ ಅಪಮಾನಿಸಿದರೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ.

ವಂದೇ ಮಾತರಂ ಗೀತೆಯನ್ನು ರಚಿಸಿದವರು ಬಂಗಾಳಿ ಕವಿ ಬಂಕಿಂ ಚಂದ್ರ ಚಟ್ಟೋಪಾಧ್ಯಾಯ. ಪ. ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿ ಗೆದ್ದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು ವಿಶೇಷ.

ಇದನ್ನೂ ಓದಿ:ಶಾಲೆಗಳಲ್ಲಿ 'ವಂದೇ ಮಾತರಂ' ಕಡ್ಡಾಯ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಿರಾಕರಿಸಿದ ಹೈಕೋರ್ಟ್