ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್‌ ಸಚಿವೆ (Union Finance and Corporate Affairs Minister) ನಿರ್ಮಲಾ ಸೀತಾರಾಮನ್‌ (Nirmala Sitharaman) ದೆಹಲಿಯ ಏಮ್ಸ್‌ ಆಸ್ಪತ್ರೆಗೆ (AIIMS Hospital) ಡಿಸೆಂಬರ್‌ 26, 2022 ರ ಸೋಮವಾರ ಮಧ್ಯಾಹ್ನ ದಾಖಲಾಗಿದ್ದಾರೆ (Admitted) ಎಂದು ಮೂಲಗಳು ತಿಳಿಸಿವೆ. 63 ವರ್ಷ ವಯಸ್ಸಿನ ಕೇಂದ್ರ ಸಚಿವೆಯನ್ನು (Union Minister) ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ದಿದ್ದು, ಸಚಿವೆಯನ್ನು ಖಾಸಗಿ ವಾರ್ಡ್‌ನಲ್ಲಿ (Private Ward) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ಆದರೆ, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗೇನೂ ಇಲ್ಲ. ವಾರ್ಷಿಕ ಸಾಮಾನ್ಯ ತಪಾಸಣೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ. 

ಇದನ್ನು ಓದಿ: ವಿಶ್ವದ ಪ್ರಭಾವಿ ಸ್ತ್ರೀಯರ ಪಟ್ಟಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್

Scroll to load tweet…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹೊಟ್ಟೆಯಲ್ಲಿ ಸೋಂಕುಂಟಾಗಿದ್ದು. ಇದರ ಜತೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೂ ಸಹ ರಾಷ್ಟ್ರ ರಾಜಧಾನಿಯಲ್ಲಿನ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಇವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದೂ ಅಧಿಕೃತ ಮೂಲಗಳು ಮಾಹಿತಿ ನೀಡಿವೆ ಎಂದೂ ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ. 

Scroll to load tweet…

ಅಲ್ಲದೆ, ಕೇಂದ್ರ ಹಣಕಾಸು ಸಚಿವೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನಿರ್ಮಲಾ ಸೀತಾರಾಮನ್‌ ಅವರಿಗೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸಚಿವೆಯ ಆರೋಗ್ಯದ ಕುರಿತು ದೆಹಲಿಯ ಏಮ್ಸ್‌ ವೈದ್ಯರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ ಎಂದೂ ತಿಳಿದುಬಂದಿದೆ.

ಇದನ್ನೂ ಓದಿ: Invest Karnataka 2022: ದೇಶದ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನ ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿರುವ ಡಾ. ಎಂಜಿಆರ್‌ ಮೆಡಿಕಲ್‌ ವಿವಿಯ 35ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಾಗೂ, ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಸದೈವ್‌ ಅಟಲ್‌ನಲ್ಲಿ ಮಾಜಿ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದ್ದರು. ಡಿಸೆಂಬರ್ 25 ರಂದು ವಾಜಪೇಯಿ ಅವರ ಹುಟ್ಟಿದ ದಿನ ಹಿನ್ನೆಲೆ ಪುಷ್ಪ ನಮನ ಸಲ್ಲಿಸಿದ್ರು.