ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆ ಪ್ರಸ್ತಾವನೆಗೆ ಕೇಂದ್ರ ಒಪ್ಪಿಗೆ!
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆ ಪ್ರಸ್ತಾವನೆ| NPR ಪರಿಷ್ಕರಣೆ ಪ್ರಸ್ತಾವನೆಗೆ ಕೇಂದ್ರದ ಗ್ರೀನ್ ಸಿಗ್ನಲ್| ಒಟ್ಟು 8,500 ಕೋಟಿ ರೂ. ವೆಚ್ಚದ ಯೋಜನೆಗೆ ಚಾಲನೆ| ಪ್ರತಿಯೊಬ್ಬ ನಿವಾಸಿಯ ಗುರುತಿನ ಸಮಗ್ರ ಮಾಹಿತಿ ಸಂಗ್ರಹ|
ನವದೆಹಲಿ(ಡಿ.24): ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ NPR (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಪರಿಷ್ಕರಣೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
2020ರ ಏಪ್ರಿಲ್’ನಿಂದ NPR ಪ್ರಕ್ರಿಯೆ ಚಾಲನೆ ಪಡೆದುಕೊಳ್ಳಲಿದ್ದು, ಯೋಜನೆಗೆ ಒಟ್ಟು 8,500 ಕೋಟಿ ರೂ. ವೆಚ್ಚವಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದ ನೇತಾಜಿ ಸಂಬಂಧಿ!
ಇನ್ನು NPR ಅನ್ನು NRC ಜಾರಿಯ ಮೊದಲ ಹಂತ ಎಂದು ಹೇಳಲಾಗುತ್ತಿದ್ದು, ಇದರ ಮೂಲಕವೇ ಅಂತಿಮವಾಗಿ CAA ಜಾರಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶ ಎಂದು ಹೇಳಲಾಗುತ್ತಿದೆ.
ಸಂಸತ್’ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾಗುತ್ತಿದ್ದಂತೆಯೇ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು NPR ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದವು.
ದೇಶದ ಪ್ರತಿಯೊಬ್ಬ ನಿವಾಸಿಯ ಗುರುತಿನ ಸಮಗ್ರ ಮಾಹಿತಿಯನ್ನು ವೈಜ್ಞಾನಿಕವಾಗಿ ಸಂಗ್ರಹಿಸುವುದು NPRನ ಮೂಲ ಉದ್ದೇಶವಾಗಿದೆ.