ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯು ಸತತ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಕೋವಿಡ್‌ ಪಾಸಿಟವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹೊಸ ತಳಿಗಳ ಪತ್ತೆಗೆ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಸೂಚನೆ ನೀಡಿದ್ದಾರೆ.

ನವದೆಹಲಿ (ಜೂ.24): ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯು ಸತತ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಕೋವಿಡ್‌ ಪಾಸಿಟವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹೊಸ ತಳಿಗಳ ಪತ್ತೆಗೆ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ಪ್ರಸ್ತುತ ಕೋವಿಡ್‌ ಪರಿಸ್ಥಿತಿಯ ಅವಲೋಕನಕ್ಕಾಗಿ ಮಾಂಡವೀಯ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ಕೋವಿಡ್‌ ತೀವ್ರ ಹರಡುವಿಕೆಯನ್ನು ನಿಯಂತ್ರಿಸಲು ಹಲವಾರು ಸೂಚನೆಗಳನ್ನು ನೀಡಿದ್ದಾರೆ.

‘ಪಾಸಿಟಿವಿಟಿ ದರ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು ಹಾಗೂ ಕೋವಿಡ್‌ ಹರಡುವಿಕೆಯ ಬಗ್ಗೆ ನಿಗಾ ಇಡಬೇಕು. ಅಲ್ಲದೇ ಜಿನೋಮ್‌ ಸೀಕ್ವೆನ್ಸಿಂಗ್‌ ಮೂಲಕ ಹೊಸ ರೂಪಾಂತರಿಯ ಸೃಷ್ಟಿಯ ಬಗ್ಗೆ ನಿಗಾ ವಹಿಸಬೇಕು’ ಎಂದು ಮಾಲವೀಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ‘ಕೋವಿಡ್‌ನಿಂದಾಗಿ ಆಸ್ಪತ್ರೆಗೆ ಸೇರಿದವರ ಪ್ರಮಾಣ ಹಾಗೂ ಇನ್‌ಫ್ಲುಯೆಂಜಾ ಮತ್ತು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದವರ ಪ್ರಮಾಣದ ಬಗ್ಗೆ ಗಮನ ವಹಿಸಬೇಕು’ ಎಂದು ಸೂಚಿಸಿದ್ದಾರೆ. ಅಲ್ಲದೇ ಅಗತ್ಯ ಪ್ರಮಾಣದಲ್ಲಿ ಲಸಿಕೆ ಲಭ್ಯವಿರುವುದರಿಂದ ಅರ್ಹರಿಗೆ ಲಸಿಕೆ ಹಾಗೂ ಬೂಸ್ಟರ್‌ ಡೋಸು ನೀಡುವ ಮೂಲಕ ಲಸಿಕಾಕರಣ ಅಭಿಯಾನದ ವೇಗ ಹೆಚ್ಚಿಸಬೇಕು ಎಂದು ಹೇಳಿದ್ದಾರೆ.

ಕೊರೋನಾ ಕಾಟ ಒಂದಾ ಎರಡಾ?: ದಂಪತಿ ಮಧ್ಯೆ ಕಲಹಕ್ಕೂ ಕಾರಣವಾಯ್ತು ಡೆಡ್ಲಿ ವೈರಸ್‌..!

ಮಾತನಾಡುವವನಿಗಿಂತ ಮೌನಿಗೆ ಕೋವಿಡ್‌ ಸಾಧ್ಯತೆ: ಇಬ್ಬರು ವ್ಯಕ್ತಿಗಳು ಮಾಸ್ಕ್‌ ಇಲ್ಲದೆ ಮಾತುಕತೆಯಲ್ಲಿ ತೊಡಗಿದ್ದಾಗ ಒಬ್ಬ ವ್ಯಕ್ತಿ ಮಾತ್ರ ಮಾತನಾಡುತ್ತಿದ್ದು, ಮತ್ತೊಬ್ಬ ವ್ಯಕ್ತಿ ಮೌನವಾಗಿದ್ದರೆ ಮೌನವಾಗಿರುವ ವ್ಯಕ್ತಿಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಇಬ್ಬರೂ ವ್ಯಕ್ತಿಗಳು ಮಾತನಾಡುತ್ತಿದ್ದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂಬ ಹೊಸ ವಿಷಯವನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ವಿಜ್ಞಾನಿಗಳು ಸಂಶೋಧನೆಯಲ್ಲಿ ಕಂಡುಕೊಂಡಿದ್ದಾರೆ.

ನಾಲ್ಕು ಅಡಿ ಅಂತರದಲ್ಲಿ ನಿಂತು ವ್ಯಕ್ತಿಗಳು ಪರಸ್ಪರ ಮಾತನಾಡುತ್ತಿದ್ದಾಗ ಎಂಜಲಿನ ಸಣ್ಣ ಹನಿ (ಡ್ರಾಪ್‌ಲೆಟ್‌) ಹರಡುವ ರೀತಿ ಬಗ್ಗೆ ವಿಶೇಷ ಅಧ್ಯಯನ ನಡೆಸಿದ್ದಾರೆ. ಈ ಅಧ್ಯಯನದ ಪ್ರಕಾರ ಇಬ್ಬರು ವ್ಯಕ್ತಿಗಳು ಮಾತನಾಡುವಾಗ ಪರಸ್ಪರ ಕಣ್ಣಿನ ಸಂಪರ್ಕ ಇಟ್ಟುಕೊಂಡೆ ತಲೆಯನ್ನು ಪರಸ್ಪರ ವಿರುದ್ಧ ದಿಕ್ಕಿಗೆ 9 ಡಿಗ್ರಿ ವಾಲಿಸಿ ಮಾತನಾಡಿದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂದಿದ್ದಾರೆ.

Covid Crisis: ಕರ್ನಾಟಕದಲ್ಲಿ ಒಮಿಕ್ರೋನ್‌ ಉಪತಳಿ ಪತ್ತೆ

ಕೊರೋನಾ ಸೋಂಕು ಗಾಳಿಯ ಮೂಲಕ ಹರಡುತ್ತದೆ ಎಂಬ ಕಾರಣಕ್ಕೆ ಮಾಸ್ಕ್‌ ಹಾಗೂ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡುವಾಗ ಬಾಯಿಂದ ಚಿಮ್ಮುವ ಡ್ರಾಪ್‌ಲೆಟ್ಸ್‌ನಿಂದ ಯಾವ ರೀತಿ ಸೋಂಕು ಹರಡುತ್ತದೆ ಎಂಬ ಬಗ್ಗೆ ಐಐಎಸ್‌ಸಿ ಬಾಹ್ಯಾಕಾಶ ಎಂಜಿನಿಯರಿಂಗ್‌ ವಿಭಾಗವು ಸ್ಟಾಕ್‌ಹೋಮ್‌ನ ನಾರ್ಡಿಕ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಥಿಯೋರಿಟಿಕಲ್‌ ಫಿಸಿಕ್ಸ್‌ ಮತ್ತು ಇಂಟರ್‌ ನ್ಯಾಷನಲ್‌ ಸೆಂಟರ್‌ ಫಾರ್‌ ಥಿಯೋರಿಟಿಕಲ್‌ ಸೈನ್ಸಸ್‌ನ ವಿಜ್ಞಾನಿಗಳ ಸಹಯೋಗದಲ್ಲಿ ಸಂಶೋಧನೆ ನಡೆಸಿದೆ. ಇದು ಜರ್ನಲ್‌ನಲ್ಲಿ ಪ್ರಕಟವಾಗಿದೆ.