ಕೊರೋನಾ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ಸಿಕ್ಕಿದೆ. ಮಾರ್ಚ್ 1 ರಿಂದ ದೇಶದಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ.  ಪ್ರಧಾನಿ ನರೇಂದ್ರ ಮೋದಿ ಬಳಿಕ ಇದೀಗ ಗೃಹ ಸಚಿವ ಅಮಿತ್ ಸಾ ಸೇರಿದಂತೆ ಹಲವು ಪ್ರಮುಖರು ಲಸಿಕೆ ತೆಗೆದುಕೊಂಡಿದ್ದಾರೆ.

ನವದೆಹಲಿ(ಮಾ.01): ಕೊರೋನಾ ವೈರಸ್ ವಿರುದ್ಧದ ಭಾರತದ ಹೋರಾಟ ತೀವ್ರಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಪ್ರಮುಖ ನಾಯಕರು ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್ ಕೂಡ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ.

ದಪ್ಪ ಚರ್ಮದ ರಾಜಕಾರಣಿಗಳಿಗೆ ಯಾವ ಸೂಜಿ? ಆಸ್ಪತ್ರೆಯಲ್ಲಿ ಮೋದಿ ಹಾಸ್ಯಚಟಾಕಿ

ಮೇದಾಂತ ಆಸ್ಪತ್ರೆಯಲ್ಲಿ ಅಮಿತ್ ಶಾ ಲಸಿಕೆ ಪಡೆದುಕೊಂಡಿದ್ದಾರೆ. 2020ರ ಆಗಸ್ಟ್ ತಿಂಗಳಲ್ಲಿ ಅಮಿತ್ ಶಾಗೆ ಕೊರೋನಾ ಸೋಂಕು ತಗುಲಿತ್ತು. ಇದೇ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದ ಅಮಿತ್ ಶಾ, ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 

ಕೋವಿಡ್ ಲಸಿಕೆ 3ನೇ ಹಂತದ ಅಭಿಯಾನ: ಏಮ್ಸ್‌ನಲ್ಲಿ ಲಸಿಕೆ ಪಡೆದ ಮೋದಿ.

ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಮಾರ್ಚ್ 2 ರಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಲಸಿಕೆ ನೀಡಲಾಗುತ್ತದೆ. ಕೋವಿನ್ ವೆಬ್ ಸೈಟ್ ಮೂಲಕ ಲಸಿಕೆಗೆ ಅರ್ಹರಾದವರು ನೋಂದಣಿ ಮಾಡಿಕೊಳ್ಳಬಹುದು