ನನದೆಹಲಿ, (ಆ.04): ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಮತ್ತು ಉಕ್ಕಿನ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ  ಕೊರೋನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅವರೇ ಟ್ವಿಟ್ಟರ್‌ ಮೂಲಕ ಖಚಿತಪಡಿಸಿದ್ದಾರೆ. ಕೊರೋನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ವಕ್ಕರಿಸಿದ ಕೊರೋನಾ...

#COVID19 ର ଲକ୍ଷଣ ଦେଖାଯିବା କାରଣରୁ ମୁଁ ପରୀକ୍ଷା କରିଥିଲି । ରିପୋର୍ଟ ପଜିଟିଭ୍ ଆସିଛି । ଡ଼ାକ୍ତରଙ୍କ ପରାମର୍ଶ କ୍ରମେ ମୁଁ ହସ୍ପିଟାଲରେ ଭର୍ତ୍ତି ହୋଇଛି ଏବଂ ସୁସ୍ଥ ଅଛି ।

— Dharmendra Pradhan (@dpradhanbjp) August 4, 2020

ಹರಿಯಾಣದ ಗುರುಗ್ರಾಮ್ ನಲ್ಲಿ ಇರುವ ಮೇದಾಂತ ಆಸ್ಪತ್ರೆಗೆ ಕೇಂದ್ರ ಸಚಿವ ಧರ್ಮೇಂದ್ ಪ್ರಧಾನ್ ದಾಖಲಾಗಿದ್ದು, ತಜ್ಞ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆಯನ್ನು ಮಾಡುತ್ತಿದೆ. 

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇತ್ತ ಕರ್ನಾಟದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಂಕು ತಗುಲಿದ್ದು, ಇಬ್ಬರೂ ಸಹ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.