Asianet Suvarna News Asianet Suvarna News

Report on Pegasus : ನ್ಯೂಯಾರ್ಕ್ ಟೈಮ್ಸ್ ಅಲ್ಲ ಅದು, ಸುಪಾರಿ ಮೀಡಿಯಾ!

ಸ್ಪೈ ಟೂಲ್ ಪೆಗಸಸ್ ಬಗ್ಗೆ ವರದಿ ಮಾಡಿದ್ದ ನ್ಯೂಯಾರ್ಕ್ ಟೈಮ್ಸ್
ಅವರದ್ದು ಸುಪಾರಿ ಮೀಡಿಯಾ ಎಂದ ಕೇಂದ್ರ ಸಚಿವ
ಪೆಗಾಸಸ್ ಸ್ಪೈವೆರ್ ವಿವಾದದ ಬಗ್ಗೆ ವಿಕೆ ಸಿಂಗ್ ಟ್ವೀಟ್

Union minister Gen V K Singh called The New York Times Supari Media over its Report on Pegasus san
Author
Bengaluru, First Published Jan 29, 2022, 10:23 PM IST | Last Updated Jan 29, 2022, 10:22 PM IST

ನವದೆಹಲಿ (ಜ.29): ಇಸ್ರೇಲ್‌ನೊಂದಿಗಿನ (Isrel) ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ಸ್ಪೈ ಟೂಲ್ (Pegasus Spy Tool) ಅನ್ನು ಖರೀದಿಸಿದೆ ಎಂದು ಹೇಳಿರುವ ಅಮೆರಿಕದ ನ್ಯೂ ಯಾರ್ಕ್ ಟೈಮ್ಸ್  (New York Times) ವರದಿಯ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ (Gen V K Singh) ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯನ್ನು"ಸುಪಾರಿ ಮೀಡಿಯಾ" ಎಂದು ಕರೆದಿದ್ದಾರೆ.

ಇಸ್ರೇಲಿ ಸ್ಪೈವೇರ್ ಪೆಗಾಸಸ್ ಮತ್ತು ಕ್ಷಿಪಣಿ ವ್ಯವಸ್ಥೆಯು 2017 ರಲ್ಲಿ ಭಾರತ ಮತ್ತು ಇಸ್ರೇಲ್ ನಡುವೆ ಸುಮಾರು 2 ಶತಕೋಟಿ ಡಾಲರ್ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ "ಕೇಂದ್ರಭಾಗಗಳು" ಎಂದು ನ್ಯೂಯಾರ್ಕ್ ಟೈಮ್ಸ್ ವರದಿಯಲ್ಲಿ ಪ್ರಕಟಿಸಿತ್ತು. ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಕೆಲವು ಸರ್ಕಾರಗಳು ತನ್ನ ಪೆಗಾಸಸ್ ಸಾಫ್ಟ್‌ವೇರ್ ಅನ್ನು ಬಳಸುವುದರೊಂದಿಗೆ ಎನ್‌ಎಸ್‌ಒ ಗ್ರೂಪ್ ಟೆಕ್ನಾಲಜೀಸ್ ಕಂಪನಿಯ ಕುರಿತಾಗಿ ದೊಡ್ಡ ವಿವಾದ ಎದುರಾಗಿತ್ತು.

ನ್ಯೂಯಾರ್ಕ್ ಟೈಮ್ಸ್ ವರದಿಗೆ ಪ್ರತಿಕ್ರಿಯಿಸಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ಸಿಂಗ್ (Minister of State for Road Transport and Highways and Civil Aviation), ಟ್ವಿಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು,, "ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಬಂಬಹುದೇ? ಅವರನ್ನು ಸುಪಾರಿ ಮಾಧ್ಯಮ ಎಂದು ಕರೆಯುತ್ತಾರೆ" ಎಂದು ಟ್ವೀಟ್ ಮಾಡಿದ್ದಾರೆ.
 


ಏನಿದು ಪೆಗಾಸಸ್‌?: ಪೆಗಾಸಸ್‌ ಎನ್ನುವುದು ಒಂದು ಗೂಢಚರ ತಂತ್ರಾಂಶ. ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್‌ ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಮೊಬೈಲ್‌ ಬಳಕೆದಾರರ ಮಾಹಿತಿ ದೋಚಲು ಇದು ಸಹಕರಿಸುತ್ತಿದೆ. ಈ ಸ್ಪೈವೇರನ್ನು ಬಳಕೆ ಮಾಡಿಕೊಂಡು ವಿಶ್ವದ ಹಲವು ದೇಶಗಳ ಸರ್ಕಾರಗಳು ತಮ್ಮ ವಿರೋಧಿಗಳು, ರಾಯಭಾರಿಗಳು, ಹಿರಿಯ ಅಧಿಕಾರಿಗಳು, ಪತ್ರಕರ್ತರ ವಿರುದ್ಧ ಗೂಡಚರ್ಯೆ ನಡೆಸುತ್ತಿವೆ ಎನ್ನಲಾಗಿದೆ. ಹಾಗೆ ನೋಡಿದರೆ ಮಾಹಿತಿ-ದತ್ತಾಂಶಗಳನ್ನು ಕದಿಯುವ ಅನೇಕ ಸ್ಪೈವೇರ್‌ಗಳಿವೆ. ಇವುಗಳು ನಿರ್ದಿಷ್ಟಕಂಪನಿಯ ಆ್ಯಪ್‌ಗಳಲ್ಲದೆ ಥರ್ಡ್‌ ಪಾರ್ಟಿ ಆ್ಯಪ್‌ಗಳನ್ನು ಇನ್‌ಸ್ಟಾಲ್‌ ಮಾಡಿದಾಗ ಫೋನ್‌ಗೆ ತನ್ನಿಂತಾನೇ ಇನ್‌ಸ್ಟಾಲ್‌ ಆಗಬಹುದು. ಆದರೆ ಪೆಗಾಸಸ್‌ ಹಾಗಲ್ಲ. ಯಾವುದೇ ಆ್ಯಪ್‌ಗಳನ್ನು ಇನ್‌ಸ್ಟಾಲ್‌ ಮಾಡದಿದ್ದರೂ ವಾಟ್ಸ್‌ಆ್ಯಪ್‌ ಮೂಲಕ ಅದು ಮೊಬೈಲ್‌ನೊಳಗೆ ಸೇರಿಕೊಳ್ಳುತ್ತದೆ.

ಪೆಗಾಸಸ್‌: ಸ್ವತಂತ್ರ ತನಿಖೆ ಕೋರಿದ್ದ ಅರ್ಜಿ ಬಗ್ಗೆ ಇಂದು ಸುಪ್ರೀಂ ತೀರ್ಪು!
ಹೇಗೆ ಕೆಲಸ ಮಾಡುತ್ತದೆ?: ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಆಗಿರುವ ವಾಟ್ಸ್‌ ಆ್ಯಪ್‌ ಸಂಖ್ಯೆಗೆ ಒಂದು ಮಿಸ್ಡ್‌ ಕಾಲ್‌ ನೀಡುವ ಮೂಲಕ ಪೆಗಾಸಸ್‌ ಗೂಢಚರ್ಯೆ ಕೆಲಸ ಆರಂಭಿಸುತ್ತದೆ. ಫೋನ್‌ ಅನ್‌ಲಾಕ್‌ ಆದ ತಕ್ಷಣ ತನ್ನಿಂತಾನೆ ಇನ್‌ಸ್ಟಾಲ್‌ ಆಗುವ ಈ ವೈರಸ್‌ ಮೊಬೈಲ್‌ನ ಸೆಕ್ಯುರಿಟಿ ಆ್ಯಪ್‌ಗಳನ್ನು ತನಗೆ ಬೇಕಾದಂತೆ ಬದಲಿಸಿಕೊಂಡು ಎಲ್ಲೋ ದೂರದಲ್ಲಿರುವ ತನ್ನ ಒಡೆಯನ ಸರ್ವರ್‌ಗೆ ನಿರಂತರವಾಗಿ ಮಾಹಿತಿ ರವಾನಿಸಲು ಆರಂಭಿಸುತ್ತದೆ.

ಪೆಗಾಸಸ್: ಜನತೆಗೆ ತಮ್ಮ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕಿದೆ, ಕೇಂದ್ರಕ್ಕೆ ಸುಪ್ರೀಂ ತರಾಟೆ!
ಫೋನಿನಲ್ಲಿ ಇರುವ ಪಾಸ್‌ವರ್ಡ್‌, ಕಾಂಟಾಕ್ಟ್, ಕ್ಯಾಲೆಂಡರ್‌ ಇವೆಂಟ್‌, ಟೆಕ್ಸ್ಟ್‌ಮೆಸೇಜ್‌, ಖಾಸಗಿ ದತ್ತಾಂಶ ಇತ್ಯಾದಿ ಎಲ್ಲಾ ಖಾಸಗಿ ಮಾಹಿತಿಯು ಆ ಸರ್ವರ್‌ನಲ್ಲಿ ಸತತವಾಗಿ ದಾಖಲಾಗುತ್ತಿರುತ್ತವೆ. ಮಾತ್ರವಲ್ಲದೆ, ಮೊಬೈಲಿನ ಕ್ಯಾಮರಾ ಮತ್ತು ಮೈಕ್ರೋಫೋನ್‌ ಬಳಸಿ ಇನ್ನಿತರ ಮಾಹಿತಿಯನ್ನು ಕೂಡ ಸಂಗ್ರಹಿಸುತ್ತದೆ. ಕೆಲವೊಮ್ಮೆ ಟೆಕ್ಸ್ಟ್‌ಸಂದೇಶದ ಮೂಲಕವೂ ಈ ಸ್ಪೈವೇರನ್ನು ಮೊಬೈಲ್‌ಗೆ ಕಳುಹಿಸಲಾಗುತ್ತದೆ. ಸಂದೇಶವನ್ನು ಓಪನ್‌ ಮಾಡಿದಾಗ ಮೊಬೈಲ್‌ ಬಳಕೆದಾರರಿಗೆ ತಿಳಿಯದಂತೆ ಇದು ಮೊಬೈಲಿನಲ್ಲಿ ಇನ್‌ಸ್ಟಾಲ್‌ ಆಗುತ್ತದೆ. ನೀವು ಎಲ್ಲಿದ್ದೀರಿ ಎಂಬ ಮಾಹಿತಿಯೂ ‘ಗೂಗಲ್‌ ಲೊಕೇಶನ್‌’ ಮೂಲಕ ಹಂಚಿಕೆಯಾಗುತ್ತದೆ. ಗೌಪ್ಯ ಸ್ಥಳದಲ್ಲಿ ನೀವು ಇದ್ದರೆ ನಿಮ್ಮ ಗಮನಕ್ಕೆ ಬಾರದೇ ಮೊಬೈಲ್‌ ಕ್ಯಾಮರಾಗಳು, ಮೈಕ್ರೋಫೋನ್‌ಗಳು ತನ್ನಿಂದ ತಾನಾಗಿಯೇ ಆಕ್ಟಿವೇಟ್‌ ಆಗುತ್ತವೆ. ಈ ಮೂಲಕ ಸ್ಥಳವನ್ನು ತಿಳಿದುಕೊಳ್ಳುತ್ತವೆ.

 

Latest Videos
Follow Us:
Download App:
  • android
  • ios