ಭೀಕರ ಅಪಘಾತದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ ಗಾಯ, ಓರ್ವ ಸಾವು!
ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಕಾರು ಅಪಘಾತಕ್ಕೀಡಾಗಿದೆ. ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿದ್ದ ಸಚಿವ ಪ್ರಹ್ಲಾದ್ ಚಿಂದ್ವಾರದಿಂದ ನರಸಿಂಘಪುರಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಮೃತಪಟ್ಟಿದ್ದಾನೆ. ಇತ್ತ ಸಚಿವರೂ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.

ಚಿಂದ್ವಾರ(ನ.07) ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ನಾಯಕರು ಸಕ್ರಿಯರಾಗಿದ್ದಾರೆ. ಇದರ ನಡುವೆ ಭೀಕರ ಅಪಘಾತದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಗಾಯಗೊಂಡು ಆಸ್ಪತ್ರೆ ದಾಖಲಾಗಿದೆ. ಭೀಕರ ಅಪಘಾದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊರ್ವ ಮೃತಪಟ್ಟಿದ್ದಾನೆ. ಬಿಜೆಪಿಯ ಪ್ರಮುಖ ನಾಯಕ, ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಪಟೇಲ್, ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನರಸಿಂಘಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಚಿಂದ್ವಾರದಿಂದ ನರಸಿಂಘಪುರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ನರಸಿಂಗಫುರಕ್ಕೆ ಸಚಿವರ ಕಾರು ಹಾಗೂ ಬೆಂಗಾವಲು ವಾಹನ ವೇಗವಾಗಿ ತೆರಳುತ್ತಿತ್ತು. ಈ ವೇಳೆ ರಾಂಗ್ ಸೈಡ್‌ನಿಂದ ನಾಲ್ವರು ಬೈಕ್ ಮೂಲಕ ಆಗಮಿಸಿದ್ದಾರೆ. ಇದು ಅಪಘಾತಕ್ಕೆ ಕಾರಣವಾಗಿದೆ. 35 ವರ್ಷದ ನಿರಂಜನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂಜನ್ ಶಾಲಾ ಶಿಕ್ಷಕರಾಗಿದ್ದು, ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿ ರಾಂಗ್ ಸೈಡ್ ಮೂಲಕ ಆಗಮಿಸಿದ್ದರು. ಇದರಿಂದ ಅಪಘಾತ ಸಂಭವಿಸಿದೆ.
ಕಿಚ್ಚನ 'ಈಗ' ಮೂವಿ ನೋಡಿದ್ದೀರಾ? ಅಂಥದ್ದೇ ಘಟನೆಯಲ್ಲಿ ಅಪಘಾತಕ್ಕೆ ಕಾರಣವಾದ ಜೇಡ!
ಬೈಕ್‌ನಲ್ಲಿದ್ದ 7 ವರ್ಷದ ನಿಖಿಲ್ ನಿರಂಜನ್, 10 ವರ್ಷದ ಸಂಸ್ಕಾರ್ ನಿರಂಜನ್ ಹಾಗೂ 17 ವರ್ಷದ ಜತಿನ್ ಬಸಂತ್ ಚಂದ್ರವಂಶಿ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಏರ್‌ಬ್ಯಾಗ್ ತೆರೆದುಕೊಂಡಿದೆ. ಆದರೂ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಲಭ್ಯವಾಗಿಲ್ಲ. ಬಿಜೆಪಿ ನಾಯಕ ವೇವಿಕ್ ಬಂತಿ ಸಾಹು ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಘಟನೆಯಿಂದ ಆಘಾತಗೊಂಡಿರುವ ಪ್ರಹ್ಲಾದ್ ಪಟೇಲ್, ದುರ್ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ತುಮಕೂರು: ಮರಳೂರು ಕೆರೆ ಏರಿ ಬಳಿ ಖಾಸಗಿ ಬಸ್- ಓಮಿನಿ ಕಾರು ಅಪಘಾತ, ಇಬ್ಬರ ಸಾವು
ಉಪ ಜಿಲ್ಲಾಧಿಕಾರಿ ಸುಧೀರ್ ಜೈನ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಸೂಕ್ತ ಚಿಕಿತ್ಸೆಗೆ ಎಲ್ಲಾ ಸೂಚನೆ ನೀಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಧೀರ್ ಜೈನ್, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ರಸ್ತೆಯಲ್ಲಿನ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಲಾಗಿದೆ. ಬೈಕ್ ರಾಂಗ್ ಸೈಡ್ ಮೂಲಕ ತೆರಳಿರುವುದು ಅಪಘಾತಕ್ಕೆ ಕಾರಣ ಅನ್ನೋದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.