ಆದಾಯ ತೆರಿಗೆ ವಿನಾಯಿತಿಯನ್ನು 12 ಲಕ್ಷ ರುಪಾಯಿವರೆಗೆ ವಿಸ್ತರಿಸಿರುವುದರಿಂದ ಮಧ್ಯಮ ವರ್ಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದ ಔಷಧಿಗಳಿಗೆ ಆಮದು ಸುಂಕ ಕಡಿಮೆ ಮಾಡಿರುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನವದೆಹಲಿ(ಫೆ.02): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಡವರು, ಮಧ್ಯಮ ವರ್ಗ, ರೈತರು, ಸಣ್ಣ ಉದ್ದಿಮೆದಾರರು ಹಾಗೂ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವ ಬಜೆಟ್ ಮಂಡಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಆದಾಯ ತೆರಿಗೆ ವಿನಾಯಿತಿಯನ್ನು 12 ಲಕ್ಷ ರುಪಾಯಿವರೆಗೆ ವಿಸ್ತರಿಸಿರುವುದರಿಂದ ಮಧ್ಯಮ ವರ್ಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದ ಔಷಧಿಗಳಿಗೆ ಆಮದು ಸುಂಕ ಕಡಿಮೆ ಮಾಡಿರುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
Budget 2025: ಕೇಂದ್ರದ ಇಂತಹ 10 ಬಜೆಟ್ ನೋಡಿದ್ದೇವೆ, ಪ್ರಿಯಾಂಕ್ ಖರ್ಗೆ
ಬೇಳೆ ಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಆಂದೋಲನ ಆರಂಭಿಸಿದೆ. ಕರ್ನಾಟಕದಲ್ಲಿ ತೊಗರಿ ಹೆಚ್ಚು ಬೆಳೆಯಲಾಗುತ್ತಿದ್ದು, ಇದರಿಂದ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ 3ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಿರುವುದರಿಂದ ರೈತರು ಕೃಷಿ ಖರ್ಚು-ವೆಚ್ಚ ಮಾಡಲು ಸಹಕಾರಿಯಾಗಲಿದೆ. ಹತ್ತಿ ಬೆಳೆಗೆ ಪ್ರೊತ್ಸಾಹ ನೀಡಲಾಗಿದೆ. ಸೇವಾ ಕ್ಷೇತ್ರದಲ್ಲಿನ ಹಂಗಾಮಿ ನೌಕರರಿಗೆ ಆರೋಗ್ಯ ವಿಮಾ ಯೋಜನೆ ವಿಸ್ತರಿಸಲಾಗಿದೆ. ಜೀವ ರಕ್ಷಕ ಔಷಧಗಳಿಗೆ ಬಜೆಟ್‌ನಲ್ಲಿ ಅಬಕಾರಿ ಸುಂಕ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಬಜೆಟ್ 2025: ವಾಡಿ-ಗದಗ್ ರೈಲ್ವೆಗೆ ಮೀಠಾ, ಯಾದಗಿರಿ-ಆಲಮಟ್ಟಿಗೆ ಖಠ್ಠಾ...!
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ನಿರ್ಮಲಾ ಸೀತರಾಮನ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದಾರೆ. ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಬೇಕಾದ ತಯಾರಿ ಬಜೆಟ್ ಮೂಲಕ ಮಾಡಲಾಗಿದೆ ಎಂದು ಅವರು ಹೇಳಿದರು.
ಹಂತ,ಹಂತವಾಗಿ ಏಮ್ಸ್ ಘಟಕಗಳನ್ನು ದೇಶಾದ್ಯಂತ ನೀಡಲಾಗುತ್ತಿದೆ. ಏಮ್ಸ್ ಎಲ್ಲಿ ಸ್ಥಾಪಿಸಬೇಕೆಂಬ ಬಗ್ಗೆ ರಾಜ್ಯ ಸರ್ಕಾರದದಲ್ಲಿ ಸ್ಪಷ್ಟತೆ ಇಲ್ಲ. ರಾಜ್ಯದಲ್ಲಿ ಏಮ್ಸ್ ನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ಬಗ್ಗೆ ಗೊಂದಲ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
