ಪತಿ ಹಾಗೂ ಪತ್ನಿ ನಡುವಿನ ದೈಹಿಕ ಸಂಪರ್ಕ ಕುರಿತು ಹೈಕೋರ್ಟ್ ನೀಡಿದ ಆದೇಶವೊಂದು ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಪತ್ನಿಯ ಅನುಮತಿ ಇಲ್ಲದೆ ಅಥವಾ ಆಕೆಗೆ ತಿಳಿಸದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರೆ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ.  

ರಾಂಚಿ(ಫೆ.11) ಪತಿ ಹಾಗೂ ಪತ್ನಿ ನಡುವಿನ ಲೈಂಗಿಕ ಕ್ರಿಯೆ ಕುರಿತು ಹಲವು ಪ್ರಕರಣಗಳು ದಾಖಲಾಗಿದೆ. ಈ ಕುರಿತು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಪೈಕಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕುರಿತು ಹೈಕೋರ್ಟ್ ನೀಡಿದ ಆದೇಶವೊಂದು ಇದೀಗ ತೀವ್ರ ಕುತೂಹಲ ಕೆರಳಿಸಿದೆ. ಮಹಿಳೆಯ ದೂರಿನ ಆಧಾರದಲ್ಲಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಆದರೆ ಹೈಕೋರ್ಟ್, ಪತ್ನಿಯ ಅನುಮತಿ ಇಲ್ಲದೆ ಅಥವಾ ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರೆ ಪತಿಯನ್ನು ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಚತ್ತೀಸಘಡ ಹೈಕೋರ್ಟ್ ಆದೇಶ ನೀಡಿದೆ.

ಏನಿದು ಪ್ರಕರಣ
2017ರಲ್ಲಿ ಪತ್ನಿಯ ಅನುಮತಿ ಇಲ್ಲದೆ ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ. ಆದರೆ ಈ ದೈಹಿಕ ಸಂಪರ್ಕದ ಬಳಿಕ ಪತ್ನಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಹೀಗಾಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಮೃತಪಟ್ಟಿದ್ದರು. ಚಿಕಿತ್ಸೆ ವೇಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಪತಿಯ ಅಸಹಜ ಲೈಂಗಿಕ ಕ್ರಿಯೆ ಕುರಿತು ದೂರು ನೀಡಿದ್ದಳು. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿದ್ದರು.

ವಿಶ್ವದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧದ ದೇಶ ಇದು, ಇಲ್ಲಿ ಮದುವೆ ಹೆಸರಿಗೆ ಮಾತ್ರ

ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಪತ್ನಿ ಸಾವಿಗೆ ಪತಿಯ ಅಸಹಜ ಲೈಂಗಿಕ ಕ್ರಿಯೆ ಕಾರಣ ಅನ್ನೋದು ದೃಋಪಟ್ಟಿತ್ತು.ಹೀಗಾಗಿ ಜಿಲ್ಲಾ ನ್ಯಾಯಾಲಯ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣ ಜಿಲ್ಲಾ ನ್ಯಾಯಾಲಯದಿಂದ ಹೈಕೋರ್ಟ್ ಮೆಟ್ಟೇಲಿರಿತ್ತು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಈ ಕುರಿತು ಮಹತ್ವದ ಆದೇಶ ನೀಡಿದೆ.

ಪತ್ನಿಯ ವಯಸ್ಸು 15 ವರ್ಷಕ್ಕಿಂತ ಮೇಲಿದ್ದರೆ, ಪತಿಯ ಲೈಂಗಿಕ ಬಯಕೆ ಹಾಗೂ ಕ್ರಿಯೆ ಕಾನೂನು ಬದ್ಧವಾಗಿದೆ. ಇಲ್ಲಿ ಅಸಹಜ ಲೈಂಗಿಕ ಕ್ರಿಯೆ ಕುರಿತು ಆರೋಪಿಸಲಾಗಿದೆ. ಆದಲೆ 15 ವರ್ಷಕ್ಕಿಂತ ಮೇಲ್ಪಟ್ಟ ಪತ್ನಿ ಜೊತೆ ಪತಿ ಲೈಂಗಿಕ ಕ್ರಿಯೆ ನಡೆಸುವುದು, ಅಥವಾ ಆಕೆಯ ಅನುಮತಿ ಇಲ್ಲದೆ ಅಸಹಜ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ. ಇದನ್ನು ಬಲಾತ್ಕಾರ ಪ್ರಕರಣ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಷ್ಟೇ ಅಲ್ಲ ಎಲ್ಲಾ ಆರೋಪಗಳಿಂದ ಖುಲಾಸೆ ಮಾಡಿದ ಕೋರ್ಟ್ ಆರೋಪಿಯನ್ನು ದೋಷ ಮುಕ್ತಗೊಳಿಸಿದೆ.