ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇಯಲ್ಲಿ ನಿಂತಿದ್ದ ಡಬಲ್‌ ಡೆಕರ್‌ ಬಸ್‌ಗೆ ಇನ್ನೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ 8 ಮಂದಿ ಸಾವಿಗೀಡಾಗಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಬಸ್‌ ಗುದ್ದಿದ ರಭಸಕ್ಕೆ ಡಬಲ್‌ ಡೆಕರ್‌ ಬಸ್‌ ಅರ್ಧದಷ್ಟು ಹಾನಿಯಾಗಿದೆ. 

ಲಕ್ನೋ (ಜುಲೈ 25): ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಸೋಮವಾರ ಬೆಳಗ್ಗೆ ದೊಡ್ಡ ಅಪಘಾತ ಸಂಭವಿಸಿದೆ. ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. 8 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಕೂಡ ಸೇರಿದ್ದಾರೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಬಲ್ ಡೆಕ್ಕರ್ ಬಸ್ ಅರ್ಧಕ್ಕೆ ಹಾನಿಯಾಗಿದೆ. ಲೋನಿಕ್ತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಎರಡೂ ಬಸ್ಸುಗಳು ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದವು. ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ರಕ್ಷಣಾ ತಂಡ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಗಾಯಾಳುಗಳನ್ನು ಬಾರಾಬಂಕಿಯ ಮೂರು ಸಮುದಾಯ ಆರೋಗ್ಯ ಕೇಂದ್ರಗಳಿಂದ ಲಕ್ನೋ ಟ್ರಾಮಾ ಸೆಂಟರ್‌ಗೆ ವರ್ಗಾವಣೆ ಮಾಡಲಾಗಿದೆ. ಡಬಲ್ ಡೆಕ್ಕರ್ ಬಸ್ ಬಿಹಾರದ ಸೀತಾಮರ್ಹಿ ಜಿಲ್ಲೆಯ ಪುಪ್ರಿ ಪಟ್ಟಣದಿಂದ ಭಾನುವಾರ ದೆಹಲಿಗೆ ಹೊರಟಿತ್ತು. ಸೋಮವಾರ ಮುಂಜಾನೆ 4 ಗಂಟೆಗೆ ಬಾರಾಬಂಕಿ ಜಿಲ್ಲೆಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಬಸ್ ನಿಂತಿತ್ತು ಎಂದು ಹೇಳಲಾಗಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಯುಪಿಇಡಿಎ ಕ್ಯಾಂಟೀನ್‌ನಲ್ಲಿ ಚಹಾ ಮತ್ತು ತಿಂಡಿ ಸೇವಿಸುತ್ತಿದ್ದರು. ಅರ್ಧ ಗಂಟೆಯ ನಂತರ 4:50 ಕ್ಕೆ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಮತ್ತೊಂದು ಬಸ್ ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರು ಎಂದು ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿದ್ದ ಎಎಸ್ಪಿ ಮನೋಜ್ ಪಾಂಡೆ ಹೇಳಿದ್ದಾರೆ.

Scroll to load tweet…

ಪಾರ್ಕಿಂಗ್‌ ಸ್ಥಳದಲ್ಲಿ ಬಸ್‌ ನಿಲ್ಲಿಸಿರಲಿಲ್ಲ: ಬಿಹಾರ ಮೂಲದ ಅಶೋಕ್‌ ಕುಮಾರ್‌, "ನಾನು ಕೈತೊಳೆಯುವ ಸಲುವಾಗಿ ಹೊರಹೋಗಿದ್ದೆ. ಆದರೆ, ಡಬಲ್‌ ಡೆಕರ್‌ ಬಸ್‌ನ ಚಾಲಕ ಬಸ್‌ ಅನ್ನು ಯುಪಿಇಡಿಎ ಕ್ಯಾಂಟೀನ್ ಎದುರಿದ್ದ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸುವ ಬದಲು ಹೈವೇ ಪಕ್ಕದಲ್ಲಿಯೇ ನಿಲ್ಲಿಸಿದ್ದ. ಇದರಿಂದಾಗಿ, ಎಕ್ಸ್‌ಪ್ರೆಸ್‌ ವೇ ಅಲ್ಲಿ ಔಏಗವಾಗಿ ಬಂದ ವೋಲ್ವೋ ಬಸ್‌ ನಿಯಂತ್ರಣ ಕಳೆದುಕೊಂದು ಈ ಬಸ್‌ಗೆ ಬಡಿದಿದೆ. ವೋಲ್ವೋ ಬಸ್‌ನಲ್ಲಿದ್ದ ಪ್ರಯಾಣಿಕರು ಸಾವು ಕಂಡಿದ್ದಾರೆ. ಆದರೆ, ಡಬಲ್‌ ಡೆಕರ್‌ (Double decker Bus) ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕ್ಯಾಂಟಿನ್‌ಗೆ ಬಂದಿದ್ದರಿಂದ ಸಾವಿನಿಂದ ಪಾರಾಗಿದ್ದಾರೆ' ಎಂದು ಹೇಳಿದ್ದಾನೆ.

ಚಿತ್ತೂರು ಅಪಘಾತದಲ್ಲಿ ಇಬ್ಬರು ಪೊಲೀಸರು ಬಲಿ; ಭಾವುಕರಾದ ಡಿಸಿಪಿ ಭೀಮಾಶಂಕರ್ ಗುಳೇದ್

18 ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ಶಿಫಾರಸು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ವತ್ಸ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಪ್ರಯಾಣಿಕರನ್ನು ಸಿಎಚ್‌ಸಿ ಹೈದರ್‌ಗಢದಲ್ಲಿ ಚಿಕಿತ್ಸೆ ನೀಡಿದ ನಂತರ ಮನೆಗೆ ಕಳುಹಿಸಲಾಗಿದೆ, ಅದೇ ಸಮಯದಲ್ಲಿ ಉಳಿದ ಪ್ರಯಾಣಿಕರನ್ನು ಅವರವರ ಮನೆಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ 200 ಮಂದಿ ರಸ್ತೆಗೆ ಬಲಿ..!

ಸಿಎಂ ಯೋಗಿ ಆದಿತ್ಯನಾಥ್‌ ಸಂತಾಪ: ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. "ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿ ಬಹಳ ದುಃಖಕರವಾಗಿದೆ. ಶೀಘ್ರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಶ್ರೀರಾಮನು ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ" ಎಂದು ಯುಪಿ ಸಿಎಂ ಟ್ವೀಟ್‌ನಲ್ಲಿ ಬರೆದಿದ್ದಾರೆ.