ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬಿಡೆನ್‌ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು 2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
 

US envoy says PM Modi invited Biden to Republic Day celebrations san

ನವದೆಹಲಿ (ಸೆ.20): ಪ್ರಧಾನಿ ನರೇಂದ್ರ ಮೋದಿ ಅವರು 2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. 2024ರ ಜನವರಿ 26ರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ಅಧ್ಯಕ್ಷ ಬಿಡೆನ್ ಅವರಿಗೆ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ನೀಡಲಾಯಿತು ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಬಿಡೆನ್ ಸೆಪ್ಟೆಂಬರ್ 8ರಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತದ ವ್ಯೂಹಾತ್ಮಕ, ರಾಜತಾಂತ್ರಿಕ ಮತ್ತು ಆರ್ಥಿಕ ಹಿತಾಸಕ್ತಿ ಮತ್ತು ಸಂಬಂಧಿತ ದೇಶದೊಂದಿಗೆ ರಾಷ್ಟ್ರದ ಸಂಬಂಧಗಳನ್ನು ಗಮನದಲ್ಲಿಟ್ಟುಕೊಂಡು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಜನವರಿಯಲ್ಲಿ 2023 ರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (2015), ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (2007), ಫ್ರೆಂಚ್ ಮಾಜಿ ಅಧ್ಯಕ್ಷರಾದ ನಿಕೋಲಸ್ ಸರ್ಕೋಜಿ (2008) ಮತ್ತು ಫ್ರಾಂಕೋಯಿಸ್ ಹೊಲಾಂಡ್ (2016) ಅವರು ಈ ಹಿಂದೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿದ್ದಾರೆ.

ಈಗಲೂ ಮೋದಿಯೇ ನಂ. 1 ಜಾಗತಿಕ ಜನಪ್ರಿಯ ನಾಯಕ: ನಮೋಗೆ ಸರಿಸಾಟಿ ಯಾರೂ ಇಲ್ಲ!

ಕೈ-ಕೈ ಹಿಡಿದು ಮಾತನಾಡಿದ ಮೋದಿ-ನಿತೀಶ್‌, ನಿರ್ಮಲಾ ಜೊತೆ ಸ್ಟ್ಯಾಲಿನ್‌ ಮಾತು..ಜಿ20 ಔತಣಕೂಟದಲ್ಲಿ ಕಂಡ ಚಿತ್ರಗಳು!

Latest Videos
Follow Us:
Download App:
  • android
  • ios