ಪಾಕಿಸ್ತಾನದ ಕ್ಷಿಪಣಿ ದಾಳಿಯ ವಿಫಲ ಪ್ರಯತ್ನಗಳ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಪ್ರತೀಕಾರದ ಕ್ರಮವನ್ನು ಆರಂಭಿಸಿದೆ. ಈ ಮಧ್ಯೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪಾಕಿಸ್ತಾನಕ್ಕೆ ತೀವ್ರ ಛೀಮಾರಿ ಹಾಕಿದ್ದಾರೆ. 

ನವದೆಹಲಿ (ಮೇ.9): ಪಾಕಿಸ್ತಾನದ ಕ್ಷಿಪಣಿ ದಾಳಿಯ ವಿಫಲ ಪ್ರಯತ್ನಗಳ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಪ್ರತೀಕಾರದ ಕ್ರಮವನ್ನು ಆರಂಭಿಸಿದೆ. ಈ ಮಧ್ಯೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪಾಕಿಸ್ತಾನಕ್ಕೆ ತೀವ್ರ ಛೀಮಾರಿ ಹಾಕಿದ್ದಾರೆ. 

'ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ಮೊದಲು ನಿಲ್ಲಿಸಬೇಕು. ಇಲ್ಲದಿದ್ರೆ ಅದರ ಪರಿಣಾಮ ಇನ್ನಷ್ಟು ಭೀಕರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುರುವಾರ (ಮೇ 8, 2025) ಪಾಕಿಸ್ತಾನವು ಜಮ್ಮು, ಪಠಾಣ್‌ಕೋಟ್, ಮತ್ತು ಉಧಂಪುರದ ಭಾರತೀಯ ಸೇನಾ ನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಪ್ರಯತ್ನಿಸಿತು, ಆದರೆ ಭಾರತದ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಯು ಎಲ್ಲಾ ದಾಳಿಗಳನ್ನು ಯಶಸ್ವಿಯಾಗಿ ತಡೆಗಟ್ಟಿತು. ಪಾಕಿಸ್ತಾನದ ಕ್ಷಿಪಣಿ ದಾಳಿಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ ಈ ಘಟನೆಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ವಿರುದ್ಧ ತಕ್ಷಣದ ಕಾರ್ಯಾಚರಣೆಯನ್ನು ಆರಂಭಿಸಿದೆ.

ಇದನ್ನೂ ಓದಿ: ಭಾರತ ಮತ್ತು ಬಲೂಚಿಸ್ತಾನದ ನಡುವೆ ಸಿಲುಕಿದ ಪಾಕ್; ಕ್ವೆಟ್ಟಾ, ಕರಾಚಿಯಲ್ಲಿ ಬಲೂಚ್ ಅರ್ಮಿ ದಾಳಿ!

ಪಾಕಿಸ್ತಾನವು ಭಯೋತ್ಪಾದಕ ದಾಳಿಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು. ಅಪರಾಧಿಗಳನ್ನು ಜವಾಬ್ದಾರರನ್ನಾಗಿಸುವ ಯಾವುದೇ ಪ್ರಯತ್ನವನ್ನು ನಾವು ಬೆಂಬಲಿಸುತ್ತೇವೆ. ಭಾರತ ಮತ್ತು ಪಾಕಿಸ್ತಾನ ಈ ಸಂಘರ್ಷ, ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ ಬ್ರೂಸ್ ಒತ್ತಾಯಿಸಿದ್ದಾರೆ. ಪ್ರಸ್ತುತ, ಎರಡೂ ದೇಶಗಳ ಸರ್ಕಾರಗಳೊಂದಿಗೆ ವಿವಿಧ ಹಂತಗಳಲ್ಲಿ ಮಾತುಕತೆಗಳು ನಡೆಯುತ್ತಿವೆ.

ಇದನ್ನೂ ಓದಿ: ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!

ಅಮೆರಿಕದ ಈ ಎಚ್ಚರಿಕೆಯು ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡವನ್ನು ಗಣನೀಯವಾಗಿ ಹೆಚ್ಚಿಸಿದೆ. ಭಾರತವು ತನ್ನ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ಒತ್ತಡವು ಪಾಕಿಸ್ತಾನದ ಮುಂದಿನ ಕ್ರಮಗಳ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು.