ರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ, ಜ.22ಕ್ಕೆ ಸಾರ್ವಜನಿಕ ರಜೆ ಘೋಷಿಸಿದ ಉತ್ತರ ಪ್ರದೇಶ!
ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಮನೆ ಮಾಡಿದೆ. ಆರಂಭದಲ್ಲೇ ಉತ್ತರ ಪ್ರದೇಶ ಸರ್ಕಾರಿ ಕಚೇರಿ,ನೌಕರರಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಯೋಗಿ ಆದಿತ್ಯನಾಥ್ ಸರ್ಕಾರ, ಜನವರಿ 22ಕ್ಕೆ ಸಾರ್ವಜನಿಕ ರಜೆ ಘೋಷಿಸಿದೆ.
ಲಖನೌ(ಜ.20) ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ 2 ದಿನ ಮಾತ್ರ ಬಾಕಿ. ಜನವರಿ 22ರಂದು ಕೋಟ್ಯಾಂಟರ ಹಿಂದೂಗಳ ಕನಸು ನನಸಾಗಲಿದೆ. ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ನಡೆಯಲಿದೆ. ಜನವರಿ 22ರ ಪ್ರಾಣಪ್ರತಿಷ್ಠೆಗೆ ಈಗಾಗಲೇ ಹಲವು ರಾಜ್ಯಗಳು, ಕೇಂದ್ರ ಸರ್ಕಾರ ಸರ್ಕಾರಿ ಕಚೇರಿ, ನೌಕರರಿಗೆ ರಜೆ ಘೋಷಿಸಿದೆ. ಇದೀಗ ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಬ್ಯಾಂಕ್, ಖಾಸಗಿ ಕಚೇರಿ ಸೇರಿದಂತೆ ಎಲ್ಲರಿಗೂ ರಜೆ ನೀಡಲಾಗಿದೆ.
ರಾಮ ಮಂದಿರ ಪ್ರಾಣ ಪ್ರತಿಷ್ಠೆಯಿಂದ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ರಜೆ ಘೋಷಣೆ ಮಾಡಿದೆ. ಈ ಹಿಂದೆ ಘೋಷಿಸಿದ್ದ ರಜೆಯನ್ನು ಮತ್ತಷ್ಟು ವಿಸ್ತರಿಸಿದೆ. ಇನ್ನು ಈಗಾಗಲೇ ಘೋಷಿಸಿರುವಂತೆ ಪ್ರಾಣಪ್ರತಿಷ್ಠೆ ದಿನ ಮದ್ಯ ಹಾಗೂ ಮಾಂಸ ಮಾರಾಟ ಕೂಡ ಬಂದ್ ಆಗಲಿದೆ. ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ಕಾರಣ ಸಿಎಂ ಯೋಗಿ ಆದಿತ್ಯನಾಥ್ ಸಾರ್ವಜನಿಕ ರಜೆ ಘೋಷಿಸಿದ್ದಾರೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಜ.22ರಂದು ಕರ್ನಾಟಕದಲ್ಲೂ ರಜೆ ಘೋಷಿಸಿ: ಕೆ.ಎಸ್.ಈಶ್ವರಪ್ಪ
ಜ.22ರ ಸೋಮವಾರದಂದು ದೇಶಾದ್ಯಂತ ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನಗಳ ಕಾಲ ರಜೆ ಘೋಷಿಸಿದೆ. ಎಲ್ಲ ನೌಕರರೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗಿಯಾಗಲು ಅನುವು ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಮಧ್ಯಾಹ್ನ 2.30ರ ವರೆಗೆ ಅರ್ಧ ದಿನ ಮುಚ್ಚಲು ನಿರ್ಧರಿಸಲಾಗಿದೆ.
ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸಘಡ, ಗುಜರಾತ್, ಹರ್ಯಾಣ, ಉತ್ತರಾಖಂಡ, ತ್ರಿಪುರಾ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯದಲ್ಲಿ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಿಸಲು ಬಿಜೆಪಿ ಒತ್ತಾಯಿಸಿದೆ. ಆದರೆ ರಾಜ್ಯ ಸರ್ಕಾರ ಈ ಕುರಿತು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಆದರೆ ಈ ರೀತಿ ಒಂದು ನಿರ್ದಿಷ್ಟ ಧರ್ಮದ ಸಮಾರಂಭಕ್ಕೆ ಸಾರ್ವಜನಿಕ ರಜೆ ಘೋಷಣೆ ಸಂವಿಧಾನಬಾಹಿರ ಎಂದು ಸಿಪಿಎಂ ವಿರೋಧ ವ್ಯಕ್ತಪಡಿಸಿದೆ.
ರಾಮ ಅಯೋಧ್ಯೆಗೆ ಬರುವ ದಿನ ರಜೆ ಘೋಷಿಸಿರುವ ರಾಜ್ಯಗಳು!