Asianet Suvarna News Asianet Suvarna News

UP Election 2022 : ಅಯೋಧ್ಯೆಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧೆ?

ಅಯೋಧ್ಯೆ, ಮಥುರಾ ಎಲ್ಲಿಯಾದರೂ ಸರಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಯೋಗಿ
ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ ಮಾಡುವ ಸಾಧ್ಯತೆ ಅಧಿಕ
ಸ್ವಕ್ಷೇತ್ರ ಗೋರಖ್ ಪುರ ತೊರೆಯಲಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ
 

Uttar Pradesh CM Yogi Adityanath  most likely contest the 2022 Assembly elections from Ayodhya san
Author
Bengaluru, First Published Jan 12, 2022, 8:51 PM IST | Last Updated Jan 12, 2022, 8:51 PM IST

ಲಖನೌ (ಜ. 12): ದೇಶದ ರಾಜಕೀಯ ಇತಿಹಾಸವನ್ನು ಬರೆಯಲಿರುವ ಅತೀದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ (Uttar Pradesh)ಏಳು ಹಂತದ ಚುನಾವಣೆಗೆ ಸಿದ್ಧವಾಗುತ್ತಿದೆ. ಈಗಾಗಲೇ ಆಡಳಿತಾರೂಢ ಬಿಜೆಪಿಯಲ್ಲಿ (BJP) ಇಬ್ಬರು ಸಚಿವರು ಸೇರಿದಂತೆ ಸಾಕಷ್ಟು ಶಾಸಕರು ರಾಜೀನಾಮೆ ಸಲ್ಲಿಸುವ ಮೂಲಕ ಚುನಾವಣೆ ರಾಜಕೀಯ ಗರಿಗೆದರಿದೆ. ಈ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath), ಭವ್ಯ ಶ್ರೀರಾಮಮಂದಿರ ತಲೆಎತ್ತಲಿರುವ ಅಯೋಧ್ಯೆಯಿಂದ (Ayodhya ) ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಅಧಿಕವಾಗಿದೆ ಎಂದು ವರದಿಯಾಗಿದೆ.

ಇನ್ನೊಂದೆಡೆ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಗೆ ಪ್ರಮುಖ ವಿರೋಧಿಯಾಗಿರುವ ಸಮಾಜವಾದಿ ಪಕ್ಷ (Samajwadi Party)ಈ ಬಾರಿ ದೊಡ್ಡ ಮಟ್ಟದ ಪೈಪೋಟಿಯನ್ನು ನೀಡಲು ಸಿದ್ಧವಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ಕನಸಿನಲ್ಲಿ ಬಿಜೆಪಿ ಇದ್ದು, ಅದಕ್ಕಾಗಿ ಅಭ್ಯರ್ಥಿಗಳನ್ನು ಅಂತಿಮ ಮಾಡುವ ನಿಟ್ಟಿನಲ್ಲಿ ಸಾಲು ಸಾಲು ಸಭೆಗಳಲ್ಲಿ ಭಾಗಿಯಾಗಿದೆ. ಚುನಾವಣೆಯಲ್ಲಿ ತಮ್ಮ ಲಾಭ ನಷ್ಟದ ಲೆಕ್ಕಾಚಾರದಲ್ಲಿರುವ ಅಭ್ಯರ್ಥಿಗಳು ಈಗಾಗಲೇ ಪಕ್ಷಗಳನ್ನು ಬದಲಾವಣೆ ಮಾಡುವ ಕಾರ್ಯದಲ್ಲಿದ್ದಾರೆ.

ಈ ನಡುವೆ ಬಂದಿರುವ ಮಾಹಿತಿಯ ಅನ್ವಯ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸ್ವಕ್ಷೇತ್ರ ಗೋರಖ್ ಪುರವನ್ನು ತೊರೆಯಲಿದ್ದು 2022ರ ವಿಧಾನಸಭೆ ಚುನಾವಣೆಯಲ್ಲಿ ಅಯೋಧ್ಯೆಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿಸಿವೆ. ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಪ್ರಮುಖ ಸಾಧನೆ ಏನೆಂದರೆ ಅಯೋಧ್ಯೆ ಶ್ರೀರಾಮ ಜನ್ಮಭೂಮಿ (Sri rama janma bhoomi) ವಿಚಾರವಾಗಿ ಇದ್ದ ಅಡೆತಡೆಗಳನ್ನು ಹೊರಹಾಕಿದ್ದು. ಈಗಾಗಲೇ ಅಲ್ಲಿ ಭವವ್ಯ ರಾಮಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಇದೇ ಕಾರಣಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಅಯೋಧ್ಯೆಯಿಂದಲೇ ಯೋಗಿ ಆದಿತ್ಯನಾಥ್ ಸ್ಪರ್ಧೆ ಮಾಡಬೇಕು ಎನ್ನುವುದು ಹೈಕಮಾಂಡ್ ನ ಆಸೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅವಿರತ ಶ್ರಮದಿಂದಾಗಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಯಾವುದೇ ಅಡೆತಡೆ ಇಲ್ಲದೆ ಸಾಗುತ್ತಿದೆ.

UP Election 2022 ಉತ್ತರ ಪ್ರದೇಶ ಚುನಾವಣಾ ಅಖಾಡಕ್ಕೆ ಶಿವಸೇನೆ, 50 ರಿಂದ 100 ಸ್ಥಾನಗಳಲ್ಲಿ ಸ್ಪರ್ಧೆ!
ಈ ತಿಂಗಳ ಆರಂಭದಲ್ಲಿ ಸೂಚನೆ ನೀಡಿದ್ದ ಯೋಗಿ ಆದಿತ್ಯನಾಥ್, ಅಯೋಧ್ಯೆಯಾದರೂ ಸರಿ, ಮಥುರವಾದರೂ (Mathura) ಸರಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತಾವು ಸಿದ್ಧ ಎಂದಿದ್ದರು. ಗೋರಖ್ ಪುರವನ್ನು ತೊರೆದು ಅಯೋಧ್ಯೆಯಲ್ಲಿ ಚುನಾವಣೆಗೆ ನಿಲ್ಲುವುದರಿಂದ ತಮಗೆ ಯಾವುದೇ ಸಮಸ್ಯೆ ಇಲ್ಲ. ಪಕ್ಷ ನಾನು ಯಾವ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಎಂದು ಬಯಸುತ್ತದೆಯೋ ಆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದೇನೆ ಎಂದು ಲಖನೌದಲ್ಲಿ (Lucknow) ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. 2017ರ ಉತ್ತರ ಪ್ರದೇಶ ಚುನಾವಣೆಯಲ್ಲಿ ದಾಖಲೆಯ 312 ಕ್ಷೇತ್ರಘಲ್ಲಿ ಬಿಜೆಪಿ ಜಯ ಸಾಧಿಸಿತ್ತು. ಆದರೆ, ಯಾರೊಬ್ಬರೂ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಸಣ್ಣ ನಿರೀಕ್ಷೆಯನ್ನೂ ಮಾಡಿರಲಿಲ್ಲ. ಆದರೆ, ಅಚ್ಚರಿಯ ಆಯ್ಕೆ ಹೊರಡಿಸಿದ್ದ ಬಿಜೆಪಿ ಹೈಕಮಾಂಡ್, ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಆಗಿ ಘೋಷಣೆ ಮಾಡಿತ್ತು. ಆದರೆ, ಈ ಬಾಅರಿ 2ನೇ ಬಾರಿಗೆ ಸಿಎಂ ಆಗುವ ನಿರೀಕ್ಷೆಯಲ್ಲಿ ಚುನಾವಣೆಗೆ ಕಣಕ್ಕಿಳಿಯಲಿದ್ದಾರೆ.

UP Election 2022 : ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರಂಟ್!
ನವೆಂಬರ್ ನಲ್ಲಿ ಹೊರಬಿದ್ದಿದ್ದ ಟೈಮ್ಸ್ ನೌ ಹಾಗೂ ಪೋಲ್ ಸ್ಟ್ರಾಟ್ ಸಮೀಕ್ಷೆಯಲ್ಲಿ, 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 239 ರಿಂದ 245 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಅಂದಾಜು ಮಾಡಲಾಗಿದೆ. ನಂತರದ ಸ್ಥಾನದಲ್ಲಿ ಸಮಾಜವಾದಿ ಪಕ್ಷವಿದ್ದು, 119 ರಿಂದ 125 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಹುಜನ ಸಮಾಜ ಪಾರ್ಟಿ 28 ರಿಂದ 32 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಲಾಗಿದೆ.

Latest Videos
Follow Us:
Download App:
  • android
  • ios