Asianet Suvarna News Asianet Suvarna News

ಅಮೇಥಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾಗೆ ರಾಯ್‌ಬರೇಲಿ ಟಿಕೆಟ್: ಯುಪಿ ಕಾಂಗ್ರೆಸ್ ಶಿಫಾರಸು!

ಕಳೆದ ಚುನಾವಣೆಯಂತೆ ರಾಹುಲ್ ಗಾಂಧಿ ಈ ಬಾರಿ ವಯನಾಡು ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. ಇದರ ಜೊತೆಗೆ ಅಮೇಥಿಯಿಂದ ಹಾಗೂ ಪ್ರಿಯಾಂಕಾ ಗಾಂಧಿಗೆ ತಾಯಿ ಸೋನಿಯಾ ಗಾಂಧಿಯ ರಾಯ್ ಬರೇಲಿ ಕ್ಷೇತ್ರ ಟಿಕೆಟ್‌ಗೆ ಕಾಂಗ್ರೆಸ್ ಪ್ರದೇಶ ಚುನಾವಣೆ ಸಮಿತಿ ಶಿಫಾರಸು ಮಾಡಿದೆ.

Uttar Pradesh Congress Election Committee recommend Rahul gandi Priyanka from Amethi Rae barely seat ckm
Author
First Published Mar 10, 2024, 10:17 PM IST

ನವದೆಹಲಿ(ಮಾ.10) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಅಮೇಥಿಯಿಂದಲೂ ಸ್ಪರ್ಧಿಸುತ್ತಾರಾ? ಪ್ರಿಯಾಂಕಾ ಗಾಂಧಿ ರಾಯ್ ಬರೇಲಿ ಯಿಂದ ಚುನಾವಣಾ ಅಖಾಡಕ್ಕೆ ಧುಮುಕುತ್ತಾರಾ ಅನ್ನೋ ತೀವ್ರ ಕುತೂಹಲಕ್ಕೆ ಉತ್ತರ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ ಉತ್ತರ ನೀಡಿದೆ. ಅಮೇಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಿಂಗ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ಫೈನಲ್ ಮಾಡಲು ಶಿಫಾಸರು ಮಾಡಿದೆ. ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿಗೆ ಈ ಶಿಫಾರಸು ಮಾಡಿದೆ. ಅಮೆಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಗಾಂಧಿ ಪರಿವಾರ ಮತ್ತೆ ಅದೃಷ್ಟ ಪರೀಕ್ಷೆ ಇಳಿಯುವುದು ಬಹುತೇಕ ಖಚಿತವಾಗಿದೆ.

2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೆಥಿಯಿಂದ ಸ್ಪರ್ಧಿಸಿ ಸೋತಿದ್ದರು. ಬಿಜೆಪಿ ನಾಯಕಿ ಸ್ಮತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಇತ್ತ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ರಾಯ್ ಬರೇಲಿ ಕ್ಷೇತ್ರವನ್ನು ಮಾತ್ರ ಉಳಿಸಿಕೊಂಡಿತ್ತು. ಸೋನಿಯಾ ಗಾಂಧಿ ರಾಯ್ ಬರೇಲಿಯಿಂದ ಗೆಲುವು ಕಂಡಿದ್ದರು. ಈ ಬಾರಿ ವಯಸ್ಸು ಹಾಗೂ ಆರೋಗ್ಯ ಕಾರಣ ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದಿರುವ ಸೋನಿಯಾ ಗಾಂಧಿ, ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ; ಗ್ರಾಮಂತರದಿಂದ ಡಿಕೆ ಸುರೇಶ್, ಗೀತಾಶಿವರಾಜ್ ಕುಮಾರ್‌ಗೆ ಶಿವಮೊಗ್ಗ ಟಿಕೆಟ್

ಸೋನಿಯಾ ಗಾಂಧಿಯ ರಾಯ್ ಬರೇಲಿ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಮುಂದುವರಿಸು ಇದೀಗ ಪ್ರಿಯಾಂಕಾ ಗಾಂಧಿಗೆ ಇದೇ ಕ್ಷೇತ್ರದ ಟಿಕೆಟ್ ನೀಡಲು ಚರ್ಚೆಯಾಗಿದೆ. ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಪದಾರ್ಪಣೆ ಮಾಡುತ್ತಿರುವ ಪ್ರಿಯಾಂಕಾ ಗಾಂಧಿಗೆ ಅಭೂತಪೂರ್ವ ಗೆಲುವಿಗೆ ಈ ಕ್ಷೇತ್ರವೇ ಉತ್ತಮ ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ. ರಾಯ್ ಬರೇಲಿ ಗಾಂಧಿ ಕುಟುಂಬವನ್ನು ಕೈಹಿಡಿದ ಕ್ಷೇತ್ರವಾಗಿದೆ. ಇದೀಗ ಪ್ರಿಯಾಂಕಾ ಗಾಂಧಿ ಚುನಾವಣಾ ಅಧ್ಯಾಯಕ್ಕೆ ಇದೇ ಕ್ಷೇತ್ರ ಸಾಕ್ಷಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಿಂದ ಗೆಲುವು ಕಂಡಿದ್ದರು. ಇದೇ ಫಲಿತಾಂಶವನ್ನು ಮರುಕಳಿಸಲು ರಾಹುಲ್ ಗಾಂಧಿ ತಯಾರಾಗಿದ್ದಾರೆ. ಹೀಗಾಗಿ ವಯನಾಡಿನ ಜೊತೆ ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸಲು 

ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ವಾರ್ನಿಂಗ್, ಪನೌತಿ, ಜೇಬುಗಳ್ಳ ಹೇಳಿಕೆಗೆ ಗರಂ!

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ.2019ರ ಚುನಾವಣೆ ರೀತಿಯಲ್ಲೇ ವಯನಾಡು ಜೊತೆಗೆ ಅಮೇಥಿಯಿಂದಲೂ ರಾಹುಲ್ ಸ್ಪರ್ಧೆ ಸಾಧ್ಯತೆ ಹೆಚ್ಚಿದೆ. 

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪೈಕಿ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ಶಶಿತರೂರ್‌, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದುಕೊಂಡಿದ್ದಾರೆ.
 

Follow Us:
Download App:
  • android
  • ios