Asianet Suvarna News Asianet Suvarna News

ಪಿಕಪ್ ವ್ಯಾನ್ ಬಸ್ ಮಧ್ಯೆ ಭೀಕರ ಅಪಘಾತ: 10 ಜನರ ದಾರುಣ ಸಾವು

ಪಿಕಪ್‌ ವ್ಯಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಸಾವನ್ನಪ್ಪಿ 27 ಜನ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲೆಂದಶಹರ್‌ನ ಸಲೇಂಪುರದಲ್ಲಿ ನಡೆದಿದೆ. 

Uttar pradesh Horrible accident between pickup van and bus 10 killed in bulandshahr akb
Author
First Published Aug 18, 2024, 3:20 PM IST | Last Updated Aug 18, 2024, 3:24 PM IST

ಬುಲೆಂದಶಹರ್‌: ಪಿಕಪ್‌ ವ್ಯಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಸಾವನ್ನಪ್ಪಿ 27 ಜನ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲೆಂದಶಹರ್‌ನ ಸಲೇಂಪುರದಲ್ಲಿ ನಡೆದಿದೆ.  

ಬುದೌನ್ ಮೀರತ್ ರಾಜ್ಯ ಹೈವೇಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ.  ಘಟನೆಗೆ ಸಂಬಂಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ. 

ಹಳಿ ತಪ್ಪಿದ ಸಬರ್‌ಮತಿ ಎಕ್ಸ್‌ಪ್ರೆಸ್: ನಿರಂತರ ರೈಲ್ವೆ ಅವಘಡಗಳ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ

ಹಾಗೆಯೇ ಈ ಅವಘಡದಲ್ಲಿ ಮೃತರಾದವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಆಡಳಿತದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅವರ ಮನವೊಲಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. 

ಅಪಘಾತದ ರಭಸಕ್ಕೆ ಪಿಕಪ್ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. 

ಮುಂಬೈ: ರಾತ್ರಿಪಾಳಿಯಲ್ಲಿದ್ದ ಮಹಿಳಾ ವೈದ್ಯೆ ಮೇಲೆ ರೋಗಿ ಹಾಗೂ ಆತನ ಕುಡುಕ ಗ್ಯಾಂಗ್‌ನಿಂದ ಹಲ್ಲೆ

 

Latest Videos
Follow Us:
Download App:
  • android
  • ios