Asianet Suvarna News Asianet Suvarna News

UP ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಐತಿಹಾಸಿಕ ಎಂದ ಮೋದಿ!

  • ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆ
  • ಅಖಿಲೇಶ್ ಯಾದವ್‌ಗೆ ಮುಖಭಂಗ, ಬಿಜೆಪಿಗೆ ಭರ್ಜರಿ ಗೆಲುವು
  • 67 ಸ್ಥಾನ ಗೆದ್ದ ಬಿಜೆಪಿ ಸಾಧನೆಗೆ ಯೋಗಿ ಆದಿತ್ಯನಾಥ್ ಅಭಿನಂದನೆ
Uttar Pradesh Zila Panchayat Election BJP wins 67 of 75 seats ckm
Author
Bengaluru, First Published Jul 3, 2021, 8:22 PM IST

ಉತ್ತರ ಪ್ರದೇಶ(ಜು.03):  ಮುಂಬರುವ ವಿಧನಾಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಜಿಲ್ಲಾ ಪಂಚಾಯತ್ ಚುನಾವಣೆಯ 75 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಉತ್ತರ ಪ್ರದೇಶದಲ್ಲಿ ಗೆಲ್ಲಲು ಪ್ರಧಾನ ಮಂತ್ರಿ ಹೆಸರೇ ಸಾಕು: ಮೋದಿ ಆಪ್ತನ ಮಾತು!

ಈ ಚುನಾವಣೆಯಲ್ಲಿ 22 ಜಿಲ್ಲಾ ಪಂಚಾಯತ್ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧ ಆಯ್ಕೆಯಲ್ಲಿ 21 ಸ್ಥಾನ ಬಿಜೆಪಿ ಪಾಲಾಗಿದ್ದರೆ, 1 ಸ್ಥಾನ ಸಮಾಜವಾದಿ ಪಕ್ಷದ ಪಾಲಾಗಿದೆ.  ಇದೀಗ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

 

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು,  ಉತ್ತಮ ಆಡಳಿತ, ಪ್ರಧಾನ ಮಂತ್ರಿ ಸಾರ್ವಜನಿಕ ಕಲ್ಯಾಣ ನೀತಿ ಹಾಗೂ ಜನರು ಬಿಜೆಪಿ ಮೇಲಿಟ್ಟಿರು ನಂಬಿಕೆಯ ಗೆಲುವಾಗಿದೆ. ರಾಜ್ಯದ ಜನತೆಗೆ ಸೇರಿದಂತೆ ಎಲ್ಲರಿಗೂ ಧನ್ಯವಾದ ಎಂದು ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಯುಪಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಅದ್ಭುತ ಗೆಲುವು ಅಭಿವೃದ್ಧಿ, ಸಾರ್ವಜನಿಕ ಸೇವೆಗೆ ಜನ ನೀಡಿದ ಆಶೀರ್ವಾದ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿ, ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಸಲ್ಲಲಿದೆ. ಉತ್ತರ ಪ್ರದೇಶ ಸರ್ಕಾರ ಹಾಗೂ ಬಿಜೆಪಿ ಸಂಘಟನೆಗೆ ಹೃತ್ಪೂರ್ವಕ ಅಭಿನಂದನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯವಿಲ್ಲ' ಯುಪಿಯಲ್ಲಿ ಹೊಸ ಕಾನೂನು!.

2022ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಜಿಲ್ಲಾಪಂಚಾಯತ್ ಅಧ್ಯಕ್ಷ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ಮೊದಲ ಹೆಜ್ಜೆಯಾಗಿದೆ. ಬಿಜೆಪಿ ಆಡಳಿತಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಇಲ್ಲಿಂದಲೆ ಬಿಜೆಪಿ ಪತನ ಆರಂಭಗೊಳ್ಳಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದರು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ನಿರೀಕ್ಷೆಯಂತೆ ಬಿಜೆಪಿ ಗೆಲುವಿನ ಸಿಹಿ ಅನುಭವಿಸಿದೆ. 

Follow Us:
Download App:
  • android
  • ios