Asianet Suvarna News Asianet Suvarna News

Uttarakhand Poll ಉತ್ತರಾಖಂಡ ಚುನಾವಣೆಗೆ ಮುಹೂರ್ತ ಫಿಕ್ಸ್, ಕಮಾಲ್ ಮಾಡುತ್ತಾ AAP?

* ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್
* 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ
* ಉತ್ತರಾಖಂಡದಲ್ಲಿ ಕಮಾಲ್ ಮಾಡುತ್ತಾ ಎಎಪಿ?

uttarakhand assembly Election 2022 polling on feb 14 results march 10 rbj
Author
Bengaluru, First Published Jan 8, 2022, 6:56 PM IST

ಉತ್ತರಾಖಂಡ, (ಜ.08): ಉತ್ತರಪ್ರದೇಶ, ಗೋವಾ, ಪಂಜಾಬ್, ಮಣಿಪುರ ಹಾಗೂ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.

ಇಂದು(ಶನಿವಾರ) ಕೇಂದ್ರ ಚುನಾವಣೆ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ಸುದ್ದಿಗೋಷ್ಠಿ ನಡೆಸಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದರು.

ತೀವ್ರ ಕುತೂಹಲ ಮೂಡಿಸಿರುವ ಉತ್ತರಾಖಂಡ ಒಟ್ಟು  70 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ.

Assembly Election 2022: ಫೆ. 10 ರಿಂದ ಮಾರ್ಚ್ 7ರವರೆಗೆ ಪಂಚರಾಜ್ಯ ಚುನಾವಣೆ, ರ‍್ಯಾಲಿ, ಪಾದಯಾತ್ರೆ, ರೋಡ್‌ಶೋ ಎಲ್ಲವೂ ಬಂದ್!

ಉತ್ತರಾಖಂಡದಲ್ಲಿ ಜನವರಿ 21ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

 ಫೆ.14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಇನ್ನು ಪ್ರಮುಖವಾಗಿ ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಮೆರವಣಿಗೆ, ರೋಡ್‌ ಶೋ ಇಲ್ಲ 
ಕೋವಿಡ್ ಮುಕ್ತ ಚುನಾವಣೆ ನಡೆಸುವ ಆಶಯ ವ್ಯಕ್ತಪಡಿಸಿರುವ ಕೇಂದ್ರ ಚುನಾವಣಾ ಆಯೋಗವು, ಜ.15ರವರೆಗೆ ಚುನಾವಣಾ ಮೆರವಣಿಗೆ, ರೋಡ್‌ ಶೋ, ಪಾದಯಾತ್ರೆ, ಪ್ರಚಾರ ಸಭೆಗಳಿಗೆ ನಿರ್ಬಂಧ ವಿಧಿಸಿದೆ. ನಾಮಪತ್ರ ಸಲ್ಲಿಕೆ ವೇಳೆಯೂ ಮೆರವಣಿಗೆ ನಡೆಸುವಂತಿಲ್ಲ ಎಂದು ಆಯೋಗ ಹೇಳಿದೆ.

ಉತ್ತರಾಖಂಡ್‌ ಚುನಾವಣೆ: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಆ ನಾಯಕ?

ಈ ಬಾರಿಯ ಕಮಾಲ್ ಮಾಡುತ್ತಾ AAP?
 ಎಲ್ಲಾ ರಾಜ್ಯಗಳಲ್ಲಿ ಎಎಪಿ ತನ್ನದೇ ಆದ ಚಾಪನ್ನು ಮೂಡಿಸಲಿದೆ. ಎಎಪಿ ಈ ಬಾರಿ ಕೆಲವು ಕ್ಷೇತ್ರಗಳಲ್ಲಾದರೂ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಈ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಎಎಪಿ ಈ ಬಾರಿ 4ರಿಂದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯ ಗಳಿಸಲಿದೆ. ಇನ್ನು ಇತರೆ ಪಕ್ಷಗಳು 0-2 ಸ್ಥಾನವನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.

ಟೈಮ್ಸ್‌ ನೌ ನವಭಾರತ್‌ನ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತರಾಖಂಡದಲ್ಲಿರುವ 70 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 42-48 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಈ ಮೂಲಕ ಬಿಜೆಪಿ ಈ ಬಾರಿಯೂ ಅಧಿಕಾರದ ಚುಕ್ಕಾಣಿಯ ಹಿಡಿಯುವ ಎಲ್ಲಾ  ಸಾಧ್ಯತೆ ಇದೆ.

ಇನ್ನು ಕಾಂಗ್ರೆಸ್‌ 12-16 ಕ್ಷೇತ್ರದಲ್ಲಿ ಗೆಲುವು ಕಾಣಲಿದೆ.  11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಶೇಕಡ 34 ರಷ್ಟು ಮತವನ್ನು ಗಳಿಸಿದೆ. ಈ ಬಾರಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ
ಬಹುಕಾಲದಿಂದ ಗುಂಪುಗಾರಿಕೆಯಿಂದ ಸುಸ್ತಾಗಿರುವ ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗೆ ರಾವತ್ ಅತ್ಯುತ್ತಮ ಭರವಸೆ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಪಕ್ಷವು ಚುನಾವಣೆಗೆ ಒಳಪಟ್ಟಿರುವ ರಾಜ್ಯಕ್ಕೆ ತನ್ನ ಸಿಎಂ ಮುಖವನ್ನು ಇನ್ನೂ ಘೋಷಿಸದಿದ್ದರೂ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ನ್ನು ರಾವತ್‌ ಮುನ್ನಡೆಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಕಳೆದ ಬಾರಿ ಚುನಾವಣೆಯ ಫಲಿತಾಂಶ 
2017ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಪಷ್ಟವಾದ ಬಹುಮತವನ್ನು ಸಾಧಿಸಿತ್ತು. ಒಟ್ಟು 70 ವಿಧಾನಸಭೆ ಕ್ಷೇತ್ರಗಳ ಪೈಕಿ 57 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೇರಿತ್ತು.

ಇನ್ನು ಕಾಂಗ್ರೆಸ್‌ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಶೇಕಡ 34 ರಷ್ಟು ಮತವನ್ನು ಗಳಿಸಿದೆ. ಈ ಬಾರಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆಯ ಬಗ್ಗೆ ಸಮೀಕ್ಷೆ ಹೇಳಿದೆ. ಇನ್ನುಳಿದ 2 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಪಡೆದಿದ್ದರು.

Follow Us:
Download App:
  • android
  • ios