ಉತ್ತರಾಖಂಡ ಸಹಸ್ತ್ರ ತಾಲ್ ಶಿಖರದ ಟ್ರೆಕ್ಕಿಂಗ್‌ನಲ್ಲಿ ಸಿಲುಕಿದ 22 ಕನ್ನಡಿಗರು; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಉತ್ತರಾಖಂಡ್ ಸಹಸ್ತ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 22 ಚಾರಣಿಗರ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದು, ಐವರು ಸಾವನ್ನಪ್ಪಿದ್ದಾರೆ.

Uttarakhand Sahastra Tal peak trekking 22 Kannadigas got stuck and five died sat

ನವದೆಹಲಿ (ಜೂ.05): ಉತ್ತರಾಖಂಡ್ ಸಹಸ್ತ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 22 ಚಾರಣಿಗರ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದಾರೆ. ಈ ಪೈಕಿ 11 ಜನರನ್ನು ರಕ್ಷಣೆ ಮಾಡಿದ್ದು, ಐವರ ಮೃತ ದೇಹಗಳನ್ನು ಹೊರ ತರಲಾಗಿದೆ.

ಉತ್ತರಾಖಂಡ್ ಘರ್ವಾಲ್ ಪರ್ವತ ಶ್ರೇಣಿಗಳಲ್ಲಿರುವ ಸಹಸ್ತ್ರ ತಾಳ್ ಶಿಖರದ ಚಾರಣಕ್ಕೆ ಬೆಂಗಳೂರಿನ 22 ಚಾರಣಿಗರ ತೆರಳಿದ್ದ ವೇಳೆ ಹವಾಮಾನ ವೈಪರೀತ್ಯದಿಂದಾಗಿ ತೀವ್ರ ಹಿಮದ ನಡುವೆ ಸಿಲುಕಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆಯೇ ರಕ್ಷಣಾ ಕಾರ್ಯದ ಮೂಲಕ 11 ಜನರನ್ನು ರಕ್ಷಣೆ ಮಾಡಲಾಗಿದ್ದು, ಐವರು ಸಾವನ್ನಪ್ಪಿದ್ದು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಇನ್ನು ಈ ಘಟನೆಯ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದ್ದು, ಎಚ್ಚೆತ್ತುಕೊಂಡ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೂಡಲೇ ಕಾರ್ಯಪ್ರವೃತ್ತರಾಗಿ ಉತ್ತರಾಖಂಡ ರಾಜ್ಯ ಸರ್ಕಾರದೊಂದಿಗೆ ಮೃತ ಚಾರಣಿಗರ ಮೃತದೇಹಗಳನ್ನು ಹೊರತೆಗೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಮನವಿ ಮಾಡಿದ್ದಾರೆ.

ಈವರೆಗೆ ರಕ್ಷಣೆ ಮಾಡಲಾದ ಸದಸ್ಯರ ವಿವರ:

1- ಸೌಮ್ಯ ಕನಲೆ ಪತ್ನಿ ವಿವೇಕ್ ಶ್ರೀಧರ್ ಎನ್ಆರ್ ಬೆಂಗಳೂರು ನಗರ ಕರ್ನಾಟಕ ವಯಸ್ಸು -36 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
2- ವಿನಯ್ MK s/o ಕೃಷ್ಣಮೂರ್ತಿ ವಯಸ್ಸು-49 ವರ್ಷ (ಉತ್ತರಕಾಶಿಯಲ್ಲಿದ್ದಾರೆ)
3-  ಸೀನಾ ಲಕ್ಷೀ ವಯಸ್ಸು-48 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
4- ಶಿವಜ್ಯೋತಿ ಪತ್ನಿ ಶಶಿ ಕಿರಣ್  ವಯಸ್ಸು-46 ವರ್ಷ ಮೇಲ್ಪಟ್ಟವರು. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
5- ಸುಧಾಕರ್ s/o B.S ನಮ್ದು ವಯಸ್ಸು-64 ವರ್ಷಗಳು. (ಉತ್ತರಕಾಶಿಯಲ್ಲಿದ್ದಾರೆ)
6- ಸ್ಮೃತಿ ಪತ್ನಿ ಗುರುರಾಜ್ ವಯಸ್ಸು-41 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
7-  ಮಧು ರೆಡ್ಡಿ 52 ವರ್ಷ ಮೇಲ್ಪಟ್ಟವರು. (ಡೆಹ್ರಾಡೂನ್ ಗೆ ಕಳುಹಿಸಲಾಗಿದೆ) 
8- ಜಯಪ್ರಕಾಶ್ ರ ಸುಂದರ್ ಎಸ್/ಓ, ವಯಸ್ಸು 61 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
9-  ಭರತ್s/o ಮಹದೇವ ಗೋಳಾ 53 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
10- ಅನಿಲ ಭಟ್ಟ s/o ಅರುಮಾಚಲ ಭಟ್ಟ್ ವಯಸ್ಸು- 52 ವರ್ಷ. (ಡೆಹ್ರಾಡೂನ್‌ಗೆ ಕಳುಹಿಸಲಾಗಿದೆ)
11- ವಿವೇಕ್ ಶ್ರೀಧರ್, ವಯಸ್ಸು-42. (ಉತ್ತರಕಾಶಿಯಲ್ಲಿ ಇರಿಸಲಾಗಿದೆ)

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗೆ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 'ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್‌ ರನ್ನೊಳಗೊಂಡ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದಾರೆ. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗದ ಮಾಧ್ಯೆ ನಿನ್ನೆ ಮಧ್ಯಾಹ್ನ 2 ಗಂಟೆಗೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಎಲ್ಲಾ ಚಾರಣಿಗರು ಅದೇ ಸ್ಥಳದಲ್ಲಿ ಅಪಾಯಕ್ಕೆ ಸಿಲುಕಿದ್ದಾರೆ.

ಇನ್ಫೋಸಿಸ್ ಸುಧಾಮೂರ್ತಿ ಹರಕೆಯಿಂದಲೇ ಗೆದ್ದುಬಂದ ಹೃದಯವಂತ ಡಾ. ಸಿ.ಎನ್. ಮಂಜುನಾಥ್!

ಕರ್ನಾಟಕದ ಚಾರಣಿಗರು ಪ್ರತಿಕೂಲ ವಾತಾವರಣದಿಂದಾಗಿ ಅಪಾಯಕ್ಕೆ ಸಿಲುಕಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿತ್ತು. ಈ ವಿಚಾರ ತಿಳಿದ ಕೂಡಲೇ ಜಿಲ್ಲಾಡಳಿತದ ಮುಖಾಂತರ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯನ್ನು ಸಂಪರ್ಕಿಸಲಾಯಿತು. ಇವರ ಸಹಾಯದಿಂದ ಕರ್ನಾಟಕದ ಚಾರಣಿಗರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳ ಸಹಾಯದಿಂದ ನಿನ್ನೆ ಸಂಜೆಯಿಂದಲೇ ತುರ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಅಲ್ಲದೆ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ, ಜೊತೆಗೆ ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. 

ರಕ್ಷಣಾ ಕಾರ್ಯಾಚರಣೆಯ ಫಲವಾಗಿ ಕೆಲವು ಚಾರಣಿಗರನ್ನು ಈವರೆಗೆ ರಕ್ಷಿಸಲಾಗಿದ್ದು, ಅವರನ್ನು ಡೆಹ್ರಾಡೂನ್‌ನ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಚಾರಣಿಗರ ಪೈಕಿ ಒಬ್ಬರೊಂದಿಗೆ ಸ್ವತಃ ನಾನು ಮಾತನಾಡಿದ್ದು, ಅಲ್ಲಿನ ಸದ್ಯದ ಪರಿಸ್ಥಿತಿಯ ಬಗ್ಗೆ ನಿಖರ ಮಾಹಿತಿ ಕಲೆಹಾಕಲಾಗಿದೆ.  ಉಳಿದವರನ್ನೂ ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದ್ದು, ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ತನ್ನಿಂದಾದ ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕಾರ್ಯಾಚರಣೆಗೆ ಸಹಕಾರ ಒದಗಿಸುವ ಸಲುವಾಗಿ ಸ್ವತಃ ನಾನು ಸಹ ಬುಧವಾರ ಮಧ್ಯಾಹ್ನ ಡೆಹ್ರಾಡೂನ್‌ ಗೆ ಹೊರಟಿದ್ದೇನೆ.

ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ನಟ ಅನುಪಮ್​ ಖೇರ್​ ನಿಗೂಢ ಪೋಸ್ಟ್​!

ದುರಾದೃಷ್ಟವಶಾತ್‌ ಕೆಲವು ಚಾರಣಿಗರು ಮೃತಪಟ್ಟಿರುವ ವರದಿಯೂ ಲಭ್ಯವಾಗಿದ್ದು, ಅದನ್ನು ನಾವು ಸ್ಥಳೀಯ ಅಧಿಕಾರಿಗಳು ಮತ್ತು ಖಾಸಗಿ ಏಜೆನ್ಸಿಗಳೊಂದಿಗೆ ಮರುದೃಢೀಕರಿಸಲು ಪ್ರಯತ್ನಿಸುತ್ತಿದ್ದೇವೆ. ಮೃತ ಚಾರಣಿಗರ ಮೃತದೇಹಗಳನ್ನು ಹೊರತೆಗೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಮುಖ್ಯಮಂತ್ರಿಗಳಾದ ಮಾನ್ಯ  ಸಿದ್ದರಾಮಯ್ಯನವರು ನಮಗೆ ಸೂಚನೆ ನೀಡಿದ್ದಾರೆ. ನಾವು ಉತ್ತರಾಖಂಡ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಿದ್ದೇವೆ ಎಂದು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios