ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನದಲ್ಲಿ ಬೀದರ್ ಮೂಲದ ಯುವಕನೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದ್ದು, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಹೈದರಾಬಾದ್: ಕರ್ನಾಟಕದ ಬೀದರ್‌ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ.

Add Asianetnews Kannada as a Preferred SourcegooglePreferred

ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್‌

ಸಫಿಲ್ಗುಡದಲ್ಲಿರುವ ಕಟ್ಟಾ ಮೈಸಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪ್ರವೇಶಿಸಿದ 26 ವರ್ಷದ ಅಲ್ತಾಫ್‌ ಈ ಕೃತ ಎಸಗಿದಾತ. ಆತ ಮೂತ್ರ ವಿಸರ್ಜನೆ ಮಾಡುತ್ತಿದ್ದನ್ನು ಗಮನಿಸಿದ ಕೆಲವರು ಆತನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆಕ್ರೋಶಗೊಂಡು ಥಳಿಸಿದ್ದಾರೆ. ಇದರ ವಿಡಿಯೋ, ಇಂಟರ್ನೆಟ್‌ನಲ್ಲಿ ವೈರಲ್‌ ಆಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿದ್ದು, ಬಿಎನ್‌ಎಸ್‌ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to load tweet…

ಹಿಂದೂಪರ ಸಂಘಟನೆಗಳು, ಬಿಜೆಪಿ ಆಕ್ರೋಶ

ಘಟನೆಗೆ ಹಿಂದೂಪರ ಸಂಘಟನೆಗಳು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ಆತನನ್ನು ಎನ್‌ಕೌಂಟರ್‌ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಜತೆಗೆ ತೆಲಂಗಾಣದಲ್ಲಿ ಆಡಳಿತರೂಢ ಕಾಂಗ್ರೆಸ್‌ ಹಿಂದೂಗಳ ಮೇಲಿನ ದಾಳಿಯಲ್ಲಿ ಬಾಂಗ್ಲಾ ಪಾಕಿಸ್ತಾನವನ್ನೂ ಮೀರಿಸುತ್ತಿದೆ ಎಂದು ಕಿಡಿಕಾರಿದೆ.

Scroll to load tweet…