ನವದೆಹಲಿ(ಜ. 05)  ಮುಖವಾಡ ಧರಿಸಿದ ಗುಂಪೊಂದು ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ಮಾಡಿದೆ.ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

50ಕ್ಕೂ ಅಧಿಕ ಜನರಿದ್ದ ತಂಡ ಜೆಎನ್‌ಯು ಆವರಣ ಪ್ರವೇಶ ಮಾಡಿತ್ತು ಎನ್ನಲಾಗಿದೆ. ಕ್ಯಾಂಪಸ್ ಪ್ರವೇಶ ಮಾಡಿ ಅಲ್ಲಿಂದ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಮಂಗಳೂರು ಪ್ರತಿಭಟನೆ ಯಾರ ಒಳಸಂಚು?

ಸಿಎಎ ಕುರಿತು ಜೆಎನ್ ಯು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ದುಷ್ಕರ್ಮಿಗಳ ಗುಂಪು ಈ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ.