ನವದೆಹಲಿ(ಡಿ.15): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಬಸ್’ಗಳು ಬೆಂಕಿಗೆ ಆಹುತಿಯಾಗಿವೆ.

ದಕ್ಷಿಣ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಘಟನೆಯ ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿದ್ದು, ಸಾರಿಗೆ ಸಂಸ್ಥೆಯ ಬಸ್ಸೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ಹೋಗುವ ಮಾರ್ಗವನ್ನು ಬಂದ್ ಮಾಡಲಾಗಿದ್ದು, ಸುಖದೇವ್ ವಿಹಾರ್ ಸ್ಟೇಷನ್, ಓಖ್ಲಾ ವಿಹಾರ್, ಜಾಸೋಲಾ ವಿಹಾರ್ ಶಾಹೀನ್ ಬಾಗ್ ಹಾಗೂ ಆಶ್ರಮ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

CAB: ಈಶಾನ್ಯಕ್ಕೆ ರಾ‘ಜೀವ’ ತುಂಬಿದ ಚಂದ್ರಶೇಖರ್!

ಶಾಂತಿ ಕಾಪಾಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.