ಟ್ರಾಫಿಕ್ ಸಿಗ್ನಲ್‌ನಲ್ಲಿ BMW ಕಾರು ನಿಲ್ಲಿಸಿ ಮೂತ್ರ ವಿಸರ್ಜಿಸಿದ ಯುವಕ; ವಿಡಿಯೋ ವೈರಲ್ ಬೆನ್ನಲ್ಲೇ ಅರೆಸ್ಟ್!
ಪುಣೆಯಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ವ್ಯಕ್ತಿಯೊಬ್ಬ ಬಹಿರಂಗವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಕ್ರಮ ಕೈಗೊಂಡು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಯೆರವಾಡದ ಶಾಸ್ತ್ರಿ ನಗರದಲ್ಲಿ ನಡೆದಿದೆ.

ವೈರಲ್ ವಿಡಿಯೋ: ಮಹಾರಾಷ್ಟ್ರದ ಪುಣೆಯಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ವ್ಯಕ್ತಿಯೊಬ್ಬ ಬಹಿರಂಗವಾಗಿ ಅಸಭ್ಯ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಪೊಲೀಸರು ಕ್ರಮ ಕೈಗೊಂಡು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಪೂರ್ಣ ಘಟನೆ ಯೆರವಾಡದ ಶಾಸ್ತ್ರಿ ನಗರದಲ್ಲಿ ನಡೆದಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಐಷಾರಾಮಿ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದಾನೆ. ಆತನ ಸ್ನೇಹಿತ ಟ್ರಾಫಿಕ್ ಸಿಗ್ನಲ್‌ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆ. ಸಿಗ್ನಲ್ ಬದಲಾದ ತಕ್ಷಣ ವೇಗವಾಗಿ ಅಲ್ಲಿಂದ ಹೋಗುತ್ತಾನೆ. ಅವನ ಜೊತೆಗಿದ್ದ ಸ್ನೇಹಿತ ನಗುತ್ತಾ ಇಡೀ ಘಟನೆಯನ್ನು ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ಭಾಗ್ಯೇಶ್ ಓಸ್ವಾಲ್ ಎಂದು ಗುರುತಿಸಲಾಗಿದೆ. ಮೂತ್ರ ವಿಸರ್ಜನೆ ಮಾಡಿದ ಯುವಕನ ಹೆಸರು ಗೌರವ್ ಅಹುಜಾ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಇಬ್ಬರೂ ಅಮಲಿನಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಬಹಿರಂಗವಾದ ನಂತರ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್: ವೈರಲ್ ವೀಡಿಯೋ
ವೈದ್ಯಕೀಯ ತಪಾಸಣೆಗೆ: ಯೆರವಾಡದ ಶಾಸ್ತ್ರಿನಗರ ಚೌಕ್‌ನಲ್ಲಿ ಯುವಕನೊಬ್ಬ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ನೋಡಿದ ತಕ್ಷಣ ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸ್ ಉಪ ಆಯುಕ್ತ ಹಿಮ್ಮತ್ ಜಾಧವ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಯೆರವಾಡ ಠಾಣೆಯ ಅಧಿಕಾರಿಯೊಬ್ಬರು, ಭಾಗ್ಯೇಶ್ ಓಸ್ವಾಲ್‌ನನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಘಟನೆ ನಡೆದಾಗ ಇಬ್ಬರೂ ಅಮಲಿನಲ್ಲಿದ್ದರು ಎಂದು ಪೊಲೀಸರಿಗೆ ಅನುಮಾನವಿದೆ. ಓಸ್ವಾಲ್‌ನನ್ನು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ನಂತರ, ಸಾರ್ವಜನಿಕವಾಗಿ ತೊಂದರೆ ಉಂಟುಮಾಡಿದ, ಅತಿ ವೇಗವಾಗಿ ವಾಹನ ಚಲಾಯಿಸಿದ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ, ಸಾರ್ವಜನಿಕ ರಸ್ತೆಗಳಲ್ಲಿ ಅಪಾಯ ಉಂಟುಮಾಡಿದ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಂಜಿನಿಯರಿಂಗ್ ಓದುತ್ತಿದ್ದ ಯುವಕ, ಮಾಡುತ್ತಿದ್ದುದು ಮಹಿಳೆಯರ ಒಳ ಉಡುಪು ಕದಿಯೋ ಕಾಯಕ!