ವಿಷಾಖಪಟ್ಟಣಂ ಅನಿಲ ಸೋರಿಕೆ ದುರಂತ| ವಿಷಾನಿಲ ಸೇವಿಸಿ 11 ಸಾವು, ಅನೇಕರ ಸ್ಥಿತಿ ಚಿಂತಾಜನಕ| ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ ಸಿಎಂಜಗನ್ ಮೋಹನ್ ರೆಡ್ಡಿ

ವಿಶಾಖಪಟ್ಟಣಂ(ಮೇ.07) ಎಲ್‌ಜಿ ಪಾಲಿಮರ್ಸ್ ರಾಸಾಯನಿಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಾನಿಲದಿಂದ ಇಬ್ಬರು ಮಕ್ಕಳು ಸೇರಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಹೀಗಿರುವಾಗ ದುರಂತ ಸಂಬಂಧ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

"

Scroll to load tweet…

ವೈಜಾಗ್‌ನಲ್ಲಿ ಮಹಾ ದುರಂತಕ್ಕೆ ಕಾರಣವಾದ ಗ್ಯಾಸ್‌ ಎಷ್ಟು ಅಪಾಯಕಾರಿ, ಗೊತ್ತಾ?

"

ಜನರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿರುವ ಸಿಎಂ ಜಗನ್ ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ಇಷ್ಟೇ ಅಲ್ಲದೇ ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಹಾಗೂ ತೀವ್ರ ಅಸ್ವಸ್ಥಗೊಂಡವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Scroll to load tweet…

ಇಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಮತ್ತು ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದ್ದಾರೆ. ಇವೆಲ್ಲವನ್ನು ಹೊರತುಪಡಿಸಿ ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುವುದಾಗಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

"

ಉಸಿರಾಡೋ ಗಾಳಿಯೇ ವಿಷವಾದಾಗ: ವಿಷಾನಿಲ ಸೇವಿಸಿ ನರಳಾಡಿದ ಜನ!

ಈಗಾಗಲೇ ಸಿಎಂ ಜಗನ್ ಮೋಹನ್ ರೆಡ್ಡಿ ವಿಶಾಖಪಟ್ಟಣದಲ್ಲಿರುವ ಕೆಜಿ ಆಸ್ಪತ್ರೆಗೆ ಭೇಟಿ ನೀಡಿ ವಿಷಾನಿಲದಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದ , ನೊಂದವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಸದ್ಯ ಎಲ್‌ಜಿ ಪಾಲಿಮರ್ಸ್ ಸುತ್ತಲಿನ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇಷ್ಟೇ ಅಲ್ಲದೇ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದು, ವಿಷಾನಿಲದ ಪರಿಣಾಮವನ್ನು ತಗ್ಗಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.