ಭೋಪಾಲ್(ನ.01): ಮಧ್ಯಪ್ರದೇಶದಲ್ಲಿ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ. ಹೀಗಿರುವಾಗಲೇ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿರುವ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ಮತ ನೀಡಿ ಎನ್ನುವ ಮೂಲಕ ಮುಜುಗರಕ್ಕೊಳಗಾಗಿದ್ದಾರೆ.

ಹೌದು ಮಾರ್ಚ್ 2020ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮಧ್ಯಪ್ರದೇಶದ ಪ್ರಮುಖ ರಾಜಕೀಯ ನಾಯಕರಾದ ಸಿಂಧಿಯಾ ಇಲ್ಲಿನ ಡಾಬ್ರಾದಲ್ಲಿ ಚುನಾವಣಾ ಪ್ರಚಾರದ ವೇಳೆ ಇಂತಹುದ್ದೊಂದು ಎಡವಟ್ಟನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಸಿಂಧಿಯಾ ತಮಗರಿವಿಲ್ಲದಂತೆ ಕಾಂಗ್ರೆಸ್‌ಗೆ ಮತ ನೀಡಿ, ಕೈ ಬಟನ್ ಒತ್ತಿ ಎಂದಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಬಿಜೆಪಿ ನಾಯಕ ಕಾಂಗ್ರೆಸ್‌ ಪರ ಪ್ರಚಾಎ ನಡೆಸುತ್ತಿದ್ದಾರೆ ಎಂದು ಅನೇಕರು ಟ್ವೀಟ್ ಮಾಡಿದ್ದಾರೆ.