ಕೋಲ್ಕತಾ(ಮಾ.17): ಪಶ್ಚಿಮ ಬಂಗಾಳ ಚುನಾವಣೆ ಸಮೀಪಿಸುತ್ತಿದೆ. ಇದೀಗ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಭರ್ಜರಿ ಕೂಡುಗೆಗಳನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ.

6 ಕ್ರಿಮಿನಲ್ ಕೇಸ್ ಮುಚ್ಚಿಟ್ಟ ದೀದಿ, ನಾಮಪತ್ರ ಅಸಿಂಧುಗೊಳಿಸಲು ಆಯೋಗಕ್ಕೆ ಬಿಜೆಪಿ ದೂರು!.

ಪ್ರತಿ ವರ್ಷ ಪಶ್ಚಿಮ ಬಂಗಾಳದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಮಮತಾ ಬ್ಯಾನರ್ಜಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಈ ಮೂಲಕ ಮುಂದಿನ ಅಧಿಕಾರವದಿಯಲ್ಲಿ ಬಂಗಾಳದ ನಿರುದ್ಯೋಗ ಸಮಸ್ಯೆಗೆ ಮುಕ್ತಿ ಹಾಕುವುದಾಗಿ ಹೇಳಿದ್ದಾರೆ. 

ಬಡವರ ಮನೆ ಬಾಗಿಲಿಗೆ ಉಚಿತ ರೇಶನ್ ವಿತರಿಸುವುದಾಗಿ ಹೇಳಿದ್ದಾರೆ. ಬಡವರಿಗೆ ಆರ್ಥಿಕ ನೆರವು ನೀಡುವು ಯೋಜನೆ ಭರವಸೆ ನೀಡಿದ್ದಾರೆ.  ಸಾಮಾನ್ಯ ಜಾತಿ ಫಲಾನುಭವಿಗಳಿಗೆ ವಾರ್ಷಿಕ 6,000 ರೂ, ಹಿಂದುಳಿದ ಸಮುದಾಯಗಳಿಗೆ ವಾರ್ಷಿಕ 12,000 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮಮತಾಗೆ ತಿರುಗುಬಾಣವಾದ 2008ರ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣ!

ಹತ್ತು ಹಲವು ಕೂಡುಗೆಗಳನ್ನು ಪ್ರಣಾಳಿಕೆಯಲ್ಲಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯುವ ಯತ್ನದಲ್ಲಿರುವ ಬಿಜೆಪಿ ಕೂಡ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ.

ಮಾರ್ಚ್ 11 ರಂದು ಟಿಎಂಸಿ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ನಂದಿಗ್ರಾಮದಲ್ಲಿ ಗಾಯಗೊಂಡ ಮಮತಾ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಬಳಿಕ ಬಿಡುಗಡೆಯಾದ ಮಮತಾ ಬ್ಯಾನರ್ಜಿ ಶೀಘ್ರದಲ್ಲೇ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಆರಂಭಗೊಳ್ಳಲಿದೆ. ಒಟ್ಟು 8 ಹಂತದಲ್ಲಿ ಬಂಗಾಳ ಚುನಾವಣೆ ನಡೆಯಲಿದೆ. ಮೇ. 02 ರಂದು ಫಲಿತಾಂಶ ಹೊರಬೀಳಲಿದೆ.