ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ಗ್ಯಾಂಗ್ ರೇಪ್, ಅಕ್ರಮ ಭೂ ಕಬಳಿಕೆ ವಿರುದ್ಧ ಸಂದೇಶ್‌ಖಾಲಿ ದ್ವೀಪ ಪ್ರದೇಶದ ಮಹಿಳೆಯರು ತಿರುಗಿಬಿದ್ದಿದ್ದಾರೆ. ಈ ವಿಚಾರವಾಗಿ ಟಿಎಂಸಿ ವಿರುದ್ಧ ಬಿಜೆಪಿ ಭಾರಿ ಪ್ರತಿಭಟನೆ ನಡೆಸುತ್ತಿದೆ. ಆದರೆ ಪ್ರತಿಭಟನಾ ನಿರಿತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡ ಪಶ್ಚಿಮ ಬಂಗಾಳ ಅಧ್ಯಕ್ಷ ಆಸ್ಪತ್ರೆ ದಾಖಲಾಗಿದ್ದಾರೆ.

ಕೋಲ್ಕತಾ(ಫೆ.14) ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಹಾಗೂ ಟಿಎಂಸಿ ವಿರುದ್ದ ಹೋರಾಟ ತೀವ್ರಗೊಳ್ಳುತ್ತಿದೆ. ಒಂದೆಡೆ ಸಂದೇಶ್‌ಖಾಲಿ ದ್ವೀಪ ಪ್ರದೇಶದ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಟಿಎಂಸಿ ಹಾಗೂ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿದೆ. ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದೆ. ಆದರೆ ಪ್ರತಿಭಟನಾ ನಿರತರನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಬಸಿರಟ್‌ನಲ್ಲಿ ನಡೆದ ಈ ಲಾಠಿ ಚಾರ್ಜ್‌ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮ್ದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಬಸಿರಟ್ ಆಸ್ಪತ್ರೆ ದಾಖಲಿಸಲಾಗಿದ್ದು, ವೈದ್ಯರ ನಿಘಾದಲ್ಲಿದ್ದಾರೆ.

ಸುಕಾಂತ ಮಜುಮ್ದಾರ್ ಜೊತೆಗೆ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ತಲೆಯಿಂದ ರಕ್ತ ಸುರಿಯುತ್ತಿರುವ ದೃಶ್ಯಗಳು ಎಲ್ಲೆಡೆ ಕಾಣುತ್ತಿದೆ. ಬಸಿರಟ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಕಾಂತ ಮಜುಮ್ದಾರ್ ಆರೋಗ್ಯ ಪರಿಸ್ಥಿತಿ ಕುರಿತು ನಿಘಾವಹಿಸಲಾಗಿದೆ. ಆಸ್ಪತ್ರೆ ಮೂಲಗಳು ಕೇಸರಿ ಪಾರ್ಟಿಯ ಅಧ್ಯಕ್ಷನ ಆರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ. 

ಲೋಕಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಅನುಮಾನ, ಭವಿಷ್ಯ ನುಡಿದ ಸಿಎಂ ಮಮತಾ!

ಸಂದೇಶ್‌ಖಾಲಿ ದ್ವೀಪ ಪ್ರದೇಶದಲ್ಲಿ ಟಿಎಂಸಿ ನಾಯಕರು ಸ್ಥಳೀಯ ಹಿಂದುಳಿದ ಸಮುದಾಯದ ಜನರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುತ್ತಿರುವುದೂ ಅಲ್ಲದೆ ಹಿಂದೂ ಮಹಿಳೆಯರನ್ನು ಅಪಹರಿಸಿ ಪಕ್ಷದ ಕಚೇರಿಯಲ್ಲೇ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಪಡಿತರ ಹಗರಣದ ಆರೋಪಿ, ಟಿಎಂಸಿ ನಾಯಕ ಶೇಖ್‌ ಶಜಹಾನ್‌ ಮತ್ತು ಆತನ ಬೆಂಬಲಿಗರೇ ಈ ಕೃತ್ಯ ಎಸಗುತ್ತಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಸ್ಥಳೀಯ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು 24 ಉತ್ತರ ಪರಗಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Scroll to load tweet…

ಬಿಜೆಪಿ ಅಧ್ಯಕ್ಷ ಸೇರಿದಂತೆ ಹಲವು ಜಿಲ್ಲಾ, ತಾಲೂಕು ನಾಯಕರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಿನ್ನೆ ರಾತ್ರಿ ಬಿಡುಗಡೆ ಮಾಡಿದ್ದರು. ಇಂದು ಪ್ರತಿಭಟನೆಯಲ್ಲಿ ಪಾಲ್ಗೊಂಡ ಸುಕಾಂತ ಮುಜುಮ್ದಾರ್ ಹಾಗೂ ಇತರ ನಾಯಕರು ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸುತ್ತಾ ಘೋಷಣೆ ಕೂಗಿದ್ದಾರೆ. ಇತ್ತ ಪೊಲೀಸರು ಪ್ರತಿಭಟನಾ ನಿರತರನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ಆರಂಭಿಸಿದ್ದಾರೆ.

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಗೂ ಮಮತಾ ಅ‘ನ್ಯಾಯ’: ಕಾಂಗ್ರೆಸ್‌ ಕಿಡಿ