ದೀದಿ-ಮೋದಿ ಮುಲಾಖಾತ್: ಪಿಎಂ-ಸಿಎಂ ನಡುವೆ ಖಾಸ್‌ಬಾತ್!
ಎರಡು ದಿನಗಳ ಪ.ಬಂಗಾಳ ಪ್ರವಾಸದಲ್ಲಿ ಪ್ರಧಾನಿ ಮೋದಿ| ಪ್ರಧಾನಿ ಮೋದಿ ಭೇಟಿಯಾದ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ| 30 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ ಉಭಯ ನಾಯಕರು| ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ| ಕೋಲ್ಕತ್ತಾ ಬಂದರಿನ 150ನೇ ವರ್ಷಾಚರಣೆ ಸಮಾರಂಭದಲ್ಲಿ ಮೋದಿ ಭಾಗಿ| ವಿಮಾನ ನಿಲ್ದಾಣದ ಹೊರಗೆ ಸಿಎಎ ವಿರೋಧಿ ಪ್ರದರ್ಶನಕಾರರಿಂದ ಪ್ರತಿಭಟನೆ|
ಕೋಲ್ಕತ್ತಾ(ಜ.11): ಎರಡು ದಿನಗಳ ಪ.ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಿಎಂ ಮಮತಾ ಬ್ಯಾನರ್ಜಿ 30 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಚರ್ಚೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೋಲ್ಕತ್ತಾ ಬಂದರಿನ 150ನೇ ವರ್ಷಾಚರಣೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
"
ಇದು ಮಮತೆಯ ತಿರುವು: ಸಿಎಎ ವಿರೋಧಿಗಳಿಂದ ದೂರದ ಕುರುಹು!
ಇದಕ್ಕೂ ಮೊದಲು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಜಗದೀಪ್ ಧನ್ಕರ್, ಸಚಿವ ಫಿರ್ಯಾದ್ ಹಕೀಮ್ ಹಾಗೂ ಬಿಜೆಪಿ ನಾಯಕರು ಸ್ವಾಗತಿಸಿದರು.
ಆದರೆ ಪ್ರಧಾನಿ ಮೋದಿ ಆಗಮನವಾಗುತ್ತಿದ್ದಂತೇ ವಿಮಾನ ನಿಲ್ದಾಣದ ಹೊರಗೆ ಸಿಎಎ ವಿರೋಧಿ ಪ್ರತಿಭಟನಾ ಪ್ರದರ್ಶನ ನಡೆದಿದ್ದು, ಪ್ರಧಾನಿ ಮೋದಿ ಹೋದಲ್ಲೆಲ್ಲಾ ಪ್ರತಿಭಟನೆ ನಡೆಸುವುದಾಗಿ ಸಿಎಎ ವಿರೋಧಿ ಒಕ್ಕೂಟ ಸ್ಪಷ್ಟಪಡಿಸಿದೆ.