ಪಶ್ಚಿಮ ಬಂಗಾಳ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರಕ್ಕೊಮ್ಮೆ ಚಿಕನ್‌ ಹಾಗೂ ಋುತುಕಾಲಿಕ ಹಣ್ಣುಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಂಚಾಯತ್‌ ಚುನಾವಣೆ ಮುನ್ನವೇ ಈ ಘೋಷಣೆ ಹೊರಬಿದ್ದಿದೆ.


ಕೋಲ್ಕತಾ: ಪಶ್ಚಿಮ ಬಂಗಾಳ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರಕ್ಕೊಮ್ಮೆ ಚಿಕನ್‌ ಹಾಗೂ ಋುತುಕಾಲಿಕ ಹಣ್ಣುಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಂಚಾಯತ್‌ ಚುನಾವಣೆ ಮುನ್ನವೇ ಈ ಘೋಷಣೆ ಹೊರಬಿದ್ದಿದೆ. ಜನವರಿಯಿಂದ ಏಪ್ರಿಲ್‌ವರೆಗೆ ನಾಲ್ಕು ತಿಂಗಳ ಅವಧಿಗೆ ಸದ್ಯ ಮಕ್ಕಳಿಗೆ ನೀಡುತ್ತಿರುವ ತರಕಾರಿ ಊಟ ಹಾಗೂ ಮೊಟ್ಟೆಯೊಂದಿಗೆ ಹೆಚ್ಚಿನ ಪೋಷಣೆ ಒದಗಿಸುವ ಸಲುವಾಗಿ ಚಿಕನ್‌ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದಕ್ಕಾಗಿ 371 ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ ಪೋಷಕಾಂಶ ಯೋಜನೆ ರೂಪಿಸಲಾಗಿದೆ. ಆದರೆ ಏಪ್ರಿಲ್‌ನ ನಂತರ ಈ ಯೋಜನೆ ಮುಂದುವರೆಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ರಾಜ್ಯದಲ್ಲಿ ಒಟ್ಟು 1.6 ಕೊಟಿ ವಿದ್ಯಾರ್ಥಿಗಳು ಪ್ರತಿನಿತ್ಯ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಾರೆ.

Karwar: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿಯೂಟ ತಿಂದು ವಿದ್ಯಾರ್ಥಿಗಳು ಅಸ್ವಸ್ಥ

PM-POSHAN Scheme: ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ