ಕೊಲ್ಕತ್ತಾ(ಮೇ.17): ಕೊರೋನಾ ಲಾಕ್‌ಡೌನ್‌ನಿಂದಾಗಿ ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರನ್ನು ರಾಜ್ಯಕ್ಕೆ ತಲುಪಿಸುತ್ತಿರುವ ಶ್ರಮಿಕ್‌ ವಿಶೇಷ ರೈಲುಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ದೆಹಲಿಯಿಂದ 2ನೇ ರೈಲು ಆಗಮನ: ಬೆಂಗಳೂರಿಗೆ 800 ಕನ್ನಡಿಗರು ವಾಪಸ್‌..!

‘ಬೇರೆ ರಾಜ್ಯಗಳಿಂದ ತವರಿಗೆ ಮರಳುತ್ತಿರುವ ವಲಸೆ ಕಾರ್ಮಿಕರ ಸಾಗಣೆಯ ಸಂಪೂರ್ಣ ವೆಚ್ಚವನ್ನು ಪಶ್ಚಿಮ ಬಂಗಾಳ ಸರ್ಕಾರವೇ ಭರಿಸಲಿದೆ. ವಲಸೆ ಕಾರ್ಮಿಕರಾರ‍ಯರೂ ಶುಲ್ಕ ಪಾವತಿಸುವುದು ಬೇಡ. ಈ ಬಗ್ಗೆ ರೈಲ್ವೆ ಮಂಡಳಿಯೊಂದಿಗೆ ಮಾತುಕತೆ ನಡೆದಿದೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ವಲಸೆ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದ ಬೆನ್ನಲ್ಲೇ, ರಾಜ್ಯದ ವಲಸೆ ಕಾರ್ಮಿಕರನ್ನು ಕರೆಸಿಕೊಳ್ಳಲು 105 ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದರು