Asianet Suvarna News Asianet Suvarna News

West Bengal: ರಾಮನವಮಿ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ, ನಂದಿಗ್ರಾಮದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ!

Ram Navami clash in Murshidabad ದೇಶದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನೇನು ಒಂದೇ ದಿನ ಇರುವಾಗ ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಶೋಭಾಯಾತ್ರೆಯ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ. ಇನ್ನು ನಂದಿಗ್ರಾಮದಲ್ಲಿ ಬಿಜೆಪಿ ಕಚೇರಿಗೂ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
 

West Bengal Stone pelting in Murshidabad Ram Navami Yatra BJP office burned Nandigram san
Author
First Published Apr 18, 2024, 11:32 AM IST

ಕೋಲ್ಕತ್ತಾ (ಏ.18): ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟದಂಥ ಘಟನೆ ನಡೆಯಬಹುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ ಬೆನ್ನಲ್ಲಿಯೇ,  ಮುರ್ಶಿದಾಬಾದ್‌ನಲ್ಲಿ ಬುಧವಾರ ನಡೆದ ರಾಮನವಮಿ ಶೋಭಾಯಾತ್ರೆಯ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಘರ್ಷಣೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದರ ನಡುವೆ, ಗಲಭೆ ಪೀಡಿದ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಹೆಚ್ಚುವರಿಯಾಗಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಶಕ್ತಿಪುರ ಪ್ರದೇಶದಲ್ಲಿ ಈ ಘರ್ಷಣೆ ನಡೆದಿದೆ ಎಂದು ಬಂಗಾಳ ಪೊಲೀಸರು ತಿಳಿಸಿದ್ದಾರೆ.  ಈ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ, ರಾತ್ರಿ ಯಾವುದೇ ಹೊಸ ಗಲಾಟೆಯ ಘಟನೆಗಳು ನಡೆದಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.

ರಾಮ ನವಮಿ ಸಂದರ್ಭದಲ್ಲಿ ಮುರ್ಷಿದಾಬಾದ್ ಮಾತ್ರವಲ್ಲದೆ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲೂ ಘರ್ಷಣೆಗಳು ನಡೆದಿವೆ.  ಇಲ್ಲಿ ರಾಮನವಮಿ ಮೆರವಣಿಗೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

ಈ ಅವಧಿಯಲ್ಲಿ ಪೊಲೀಸರು ಐವರು ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪಾಲ್ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರ ಬಿಡುಗಡೆಗೆ ಒತ್ತಾಉ ಮಾಡಿದ್ದಾರೆ. ಪಾಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಟೈರ್ ಸುಟ್ಟು ಬೆಲ್ಡಾ-ಕಂಠಿ ಹೆದ್ದಾರಿ ತಡೆದು ರಾತ್ರಿಯಿಡೀ ಧರಣಿ ನಡೆಸಿದರು. ಇದೇ ವೇಳೆ ನಂದಿಗ್ರಾಮದ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಘಟನೆಯೂ ವರದಿಯಾಗಿದೆ.

ಸಮಾವೇಶದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಬಂಗಾಳ ಬಿಜೆಪಿ ಆರೋಪಿಸಿದೆ. ಆಡಳಿತದಿಂದ ಅನುಮೋದನೆ ಪಡೆದ ನಂತರ ರಾಮನವಮಿ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲಾಗುತ್ತಿದೆ ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. ಆದರೆ ಕೆಲ ಕಿಡಿಗೇಡಿಗಳು ಮುರ್ಷಿದಾಬಾದ್‌ನ ಶಕ್ತಿಪುರದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಚ್ಚರಿ ಎನ್ನುವಂತೆ ಈ ಬಾರಿ ಮಮತಾ ಸರ್ಕಾರದ ಪೊಲೀಸರೂ ಈ ಕಿಡಿಗೇಡಿಗಳ ಜತೆ ಕೈಜೋಡಿಸಿ ರಾಮನ ಭಕ್ತರ ಮೇಲೆ ಅಶ್ರುವಾಯು ಸಿಡಿಸಲಾರಂಭಿಸಿದ್ದಾರೆ. ಈ ಮೆರವಣಿಗೆಯನ್ನು ನಿಲ್ಲಿಸಲು ಈ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಪ್ರಭು ಶ್ರೀರಾಮನಿಗೆ ಮನಮೋಹಕ ಸೂರ್ಯ ತಿಲಕ! ಈ ಅದ್ಭುತ ದೃಶ್ಯಾವಳಿ ಕಣ್ತುಂಬಿಕೊಳ್ಳಿ..

ಎನ್‌ಐಎ ತನಿಖೆಗೆ ಮನವಿ: ಈ ನಿಟ್ಟಿನಲ್ಲಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಮಧ್ಯಪ್ರವೇಶಿಸಬೇಕು ಹಾಗೂ ರಾಮನವಮಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಯವರ ಉದ್ರೇಕಕಾರಿ ಭಾಷಣದಿಂದಾಗಿ ಬಂಗಾಳದ ಪ್ರದೇಶಗಳಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಸಿಎಂ ಪ್ರಚೋದನಕಾರಿ ಭಾಷಣದಿಂದ ಕಿಡಿಗೇಡಿಗಳು ಕೆರಳಿದ್ದಾರೆ. ಅವರ ವಿರುದ್ಧ ಆಡಳಿತ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆ ಈ ಜನರಿಗೆ ಇದರಿಂದ ಸಿಕ್ಕಿತ್ತು. ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರಿಗೆ ಪತ್ರ ಬರೆದಿದ್ದು, ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಘಟನೆಯ ಕುರಿತು ಎನ್‌ಐಎ ತನಿಖೆಗೆ ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

Photos: ರಾಮನವಮಿಯಂದು ಕಣ್ತುಂಬಿಕೊಳ್ಳಿ ಪ್ರಭು ಶ್ರೀರಾಮನ ಭವ್ಯ ಅಲಂಕಾರ!

Follow Us:
Download App:
  • android
  • ios