Asianet Suvarna News Asianet Suvarna News

What Is Bitcoin: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್‌ ಕಾಯಿನ್ ಅಂದ್ರೇನು?ಇಲ್ಲಿದೆ ಮಾಹಿತಿ

* ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣ
* ಬಿಟ್ ಕಾಯಿನ್ ಅಂದ್ರೆ ಏನು? ಹೇಗೆ  ಕೆಲಸ ನಿರ್ವಹಿಸುತ್ತದೆ? 
* ಬಿಟ್‌ ಕಾಯಿನ್‌ಗೆ ಏಕೆ ಇಷ್ಟು ಮಹತ್ವ?
* ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ಕೆಳಗಿನಂತಿದೆ ನೋಡಿ..

What is bitcoin how does it work explained rbj
Author
Bengaluru, First Published Nov 15, 2021, 9:15 PM IST
  • Facebook
  • Twitter
  • Whatsapp

ಬೆಂಗಳೂರು, (ನ.15): ಬಿಟ್ ಕಾಯಿನ್ ಹಗರಣ (Bitcoin Scam) ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ಬಿಟ್‌ ಕಾಯಿನ್ ಅನ್ನೋ ಪದವನ್ನೇ ಬಹಳಷ್ಟು ಜನರಿಗೆ ಗೊತ್ತೇ ಇರಲಿಲ್ಲ. ಯಾವಾಗ ಹ್ಯಾಕರ್ ಶ್ರೀಕಿ ಪೊಲೀಸರಿಗೆ ತಗಲಾಕಿಕೊಂಡನೋ ಆಗ ಈ ಬಿಟ್ ಕಾಯಿನ್ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಲು ಶುರುವಾಯ್ತು. 

Suvarna FIR; ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿ ಪಕ್ಷ ಕಾಂಗ್ರೆಸ್, ಬಿಜೆಪಿ ವಿರುದ್ಧ ಹೋರಾಟವನ್ನು ತೀವ್ರಗೊಳಿಸುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ಕುರಿತಾಗಿ ರಾಜ್ಯ ನಾಯಕರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಬೊಮ್ಮಾಯಿ ಸಿಎಂ ಕುರ್ಚಿ ಸದ್ದಿಲ್ಲದೆ  ಅಲುಗಾಡಲಾರಂಭಿಸಿದೆ. ಇಷ್ಟು ಗಂಭೀರವಾಗಿರುವ ಬಿಟ್ ಕಾಯಿನ್‌ ಬಗ್ಗೆ ರಾಜ್ಯ ಮಾತ್ರವಲ್ಲ ಇಡೀ ದೇಶದೆಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಹಾಗಾಗಿ ಈ ಬಿಟ್ ಕಾಯಿನ್ ಅಂದ್ರೆ ಏನು? (What Is Bitcoin) ಹೇಗೆ ವ್ಯವಹಾರ ನಡೆಯುತ್ತೆ? ಎನ್ನುವುದರ ಬಗ್ಗೆ ಎಲ್ಲರೂ ಕೊಂಚ ಅರಿವನ್ನು ಹೊಂದಿರುವುದು ಅವಶ್ಯವಾಗಿದೆ.

ಬಿಟ್ ಕಾಯಿನ್ ಎಂದರೇನು? 
ಬಿಟ್‌ಕಾಯಿನ್ ಎನ್ನುವುದು 2009 ರಲ್ಲಿ ರಚಿಸಲಾದ ಡಿಜಿಟಲ್ ಕರೆನ್ಸಿಯಾಗಿದೆ.  ಸಂತೋಷಿ ನಕಮೋಟೋ ಎಂಬ ಕಾವ್ಯನಾಮದ ಸಂಸ್ಥೆಯೊಂದು ಬಿಟ್ ಕಾಯಿನ್ ವ್ಯವಸ್ಥೆಯನ್ನು ಪರಿಚಯಿಸಿದ್ದು, ಬಿಟ್ ಕಾಯಿನ್ ಅಂದ್ರೆ ಕಣ್ಣಿಗೆ ಕಾಣಲ್ಲ. ಅದೊಂದು ಡಿಜಿಟಲ್ ಕರೆನ್ಸಿ. ಇದು ಆನ್‌ಲೈನ್ ಮತ್ತು ಇಟ್ಟಿಗೆ ಮತ್ತು ಗಾರೆ ಖರೀದಿಗೆ ಬಳಸುವ ಸಂಸ್ಕರಿಸಿದ ಡೇಟಾ ಬ್ಲಾಕ್‌ಗಳಿಂದ ಮಾಡಲ್ಪಟ್ಟ ಡಿಜಿಟಲ್ ಕ್ರಿಪ್ಟೋ ಕರೆನ್ಸಿಯಾಗಿದೆ.

 ಸಾಂಪ್ರದಾಯಿಕ ಆನ್‌ಲೈನ್ ಪಾವತಿ ಕಾರ್ಯವಿಧಾನಗಳಿಗಿಂತ ಕಡಿಮೆ ವಹಿವಾಟು ಶುಲ್ಕದ ಭರವಸೆಯನ್ನು ಬಿಟ್‌ಕಾಯಿನ್ ನೀಡುತ್ತದೆ ಮತ್ತು ಇದನ್ನು ಸರ್ಕಾರ ನೀಡುವ ಕರೆನ್ಸಿಗಳಿಗಿಂತ ಭಿನ್ನವಾಗಿ ವಿಕೇಂದ್ರೀಕೃತ ಪ್ರಾಧಿಕಾರವು ನಿರ್ವಹಿಸುತ್ತದೆ. ಬಿಟ್‌ಕಾಯಿನ್‌ಗಳು ಸೀಮಿತವಾಗಿರುವುದರಿಂದ ಮತ್ತು ಅವುಗಳ ಮೌಲ್ಯವನ್ನು ಮಾರುಕಟ್ಟೆ ಶಕ್ತಿಗಳು ನಿರ್ಧರಿಸುವುದರಿಂದ, ಬಿಟ್‌ಕಾಯಿನ್‌ಗಳನ್ನು ಸಹ ವಿವಿಧ ವಿನಿಮಯ ಕೇಂದ್ರಗಳಲ್ಲಿನ ಷೇರುಗಳಂತೆ ವ್ಯಾಪಾರ ಮಾಡಲಾಗುತ್ತದೆ. ಬಿಟ್‌ಕಾಯಿನ್‌ಗಳನ್ನು ಯಾವುದೇ ಬ್ಯಾಂಕುಗಳು ಅಥವಾ ಸರ್ಕಾರಗಳು ನೀಡುವುದಿಲ್ಲ ಅಥವಾ ಬೆಂಬಲಿಸುವುದಿಲ್ಲ, ಅಥವಾ ವೈಯಕ್ತಿಕ ಬಿಟ್‌ಕಾಯಿನ್‌ಗಳು ಸರಕುಗಳಂತೆ ಮೌಲ್ಯಯುತವಾಗಿರುವುದಿಲ್ಲ.

2009ರಲ್ಲಿ  ಇದೀಗ ಮಾರ್ಚ್‌ 2021ರ ಅಂಕಿಅಂಶವನ್ನು ನೋಡಿದರೆ ಇಡೀ ವಿಶ್ವದಲ್ಲಿ ಒಟ್ಟು 18.6 ದಶ ಲಕ್ಷ ಬಿಟ್ ಕಾಯಿನ್‌ಗಳು ಬಳಕೆಯಲ್ಲಿವೆ. ಇದರ ಒಟ್ಟು ಮಾರುಕಟ್ಟೆ ಮೌಲ್ಯ 927 ಬಿಲಿಯನ್ ಅಮೆರಿಕನ್ ಡಾಲರ್..

 ಬಿಟ್ ಕಾಯಿನ್‌ಗಳನ್ನು ಹೇಗೆ ಖರ್ಚು ಮಾಡಬಹುದು? 
ಇದೊಂದು ಡಿಜಿಟಲ್ ಹಣಕಾಸು ಅಥವಾ ಡಿಜಿಟಲ್ ಕರೆನ್ಸಿ ಆಗಿದೆ. ಅಂದರೆ ಆನ್ಲೈನ್ ಮೂಲಕ ಪಾವತಿಸಲು ನಿಜವಾದ ನಾಣ್ಯವನ್ನು ನೀಡಬೇಕಾಗಿಲ್ಲ. ಇಂದು ಸುಮಾರು 800ರಷ್ಟು ಇಂತಹ ಕ್ರಿಪ್ಟೋಕರೆನ್ಸಿ (cryptocurrency) ಗಳಿವೆ. ಈ ತಂತ್ರಜ್ಞಾನವನ್ನು ಬ್ಲಾಕ್ಚೈನ್ (blockchain) ಎಂಬ ನೂತನ ವಿಧಾನದ ಆಧಾರದಲ್ಲಿ ಸಾರ್ವಜನಿಕರಿಗೆ ಮಿಥ್ಯಾಹಣದ ಮೂಲಕ ಸುಲಭವಾಗಿ ತಮ್ಮ ಹಣಕಾಸಿನ ವ್ಯವಹಾರಗಳನ್ನು ವಿಶ್ವಮಟ್ಟದಲ್ಲಿ ನಡೆಸಲು ಸಾಧ್ಯವಾಗುತ್ತದೆ.

ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ದರವು ಬೇಡಿಕೆ ಹಾಗೂ ಲಭ್ಯತೆ ಆಧಾರದ ಮೇಲೆ ಏರಿಳಿಕೆಯಾಗುತ್ತೆ.. ಅಂದರೆ, ಬೇಡಿಕೆ ಹೆಚ್ಚಾದಂತೆ ಬೆಲೆಯೂ ಹೆಚ್ಚಾಗುತ್ತೆ. ಒಂದು ಕಂಪನಿಯ ಕ್ರಿಪ್ಟೋ ಕರೆನ್ಸಿಗೂ ಮತ್ತೊಂದು ಕಂಪನಿಯ ಕರೆನ್ಸಿಗೂ ಮೌಲ್ಯ ಹೆಚ್ಚು ಕಮ್ಮಿ ಆಗುತ್ತಿರುತ್ತದೆ.

ಮೋದಿ ಅಮೆರಿಕಗೆ ಹೋದಾಗಲೇ ಬಿಟ್‌ ಕಾಯಿನ್ ಮಾಹಿತಿ ಸಿಕ್ತಾ?
ಹೌದು...ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ ಈ ಬಿಟ್ ಕಾಯಿನ್ ಹಗರಣವಾಗಿರುವುದು ಮಾಹಿತಿ ಸಿಕ್ಕಿದಿಯಂತೆ. ಹೀಗಂತ ಮಾಜಿ ಸಿಎಂ ಎಚ್‌ಡಿಕೆ ಕುಮಾರಸ್ವಾಮಿ ಹೇಳಿದ್ದಾರೆ.
 
ಪ್ರಧಾನಿ ಮೋದಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬರುತ್ತಿರಲಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಅಮೆರಿಕಾದಲ್ಲಿ ಪ್ರಧಾನಿ ಅವರಿಗೆ ಕೆಲ ತನಿಖಾ ಸಂಸ್ಥೆಗಳ ಮುಖ್ಯಸ್ಥರು ಬಿಟ್ ಕಾಯಿನ್ ಹಗರಣದ ವಿವರ ನೀಡಿದ್ದಾರೆ. ಅಲ್ಲಿ ಅವರಿಗೆ ಕಸಿವಿಸಿ ಆಗಿರುವುದು ನಿಜ. ಹೀಗಾಗಿ ಪ್ರಧಾನಿ ಅವರು ಮೌನವಾಗಿದ್ದರೂ ಇಡೀ ಹಗರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಟ್ ಕಾಯನ್ ಪ್ರಕರಣ ಕಳೆದ 15 ದಿನಗಳಿಂದ ಸದ್ದು ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow Us:
Download App:
  • android
  • ios