Asianet Suvarna News Asianet Suvarna News

3 ವರ್ಷ ತಮಿಳ್ನಾಡು ಗೌರ್ನರ್‌ ಏನು ಮಾಡ್ತಿದ್ದರು: ಸುಪ್ರೀಂ ಕಿಡಿ; ಮಸೂದೆಗಳಿಗೆ ಅಂಕಿತ ಹಾಕದ ಕ್ರಮಕ್ಕೆ ಆಕ್ಷೇಪ

ಈ ಮಸೂದೆಗಳು 2020ರಿಂದ ಬಾಕಿಯಿವೆ. 3 ವರ್ಷದಿಂದ ರಾಜ್ಯಪಾಲರು ಏನು ಮಾಡುತ್ತಿದ್ದರು? ವಿಧಾನಸಭೆ ಮತ್ತೆ ಈ ಮಸೂದೆಗಳನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದೆ. ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ ಎಂದು ಸುಪ್ರೀಂಕೋರ್ಟ್‌ ಕಟುವಾಗಿ ಹೇಳಿತು.

what was governor doing for 3 years supreme court on tamil nadu bills delay ash
Author
First Published Nov 21, 2023, 9:28 AM IST

ನವದೆಹಲಿ (ನವೆಂಬರ್ 21, 2023): ತಮಿಳುನಾಡಿನ ರಾಜ್ಯಪಾಲ ಆರ್‌.ಎನ್‌.ರವಿ ಅವರು ದೀರ್ಘ ಅವಧಿಯಿಂದ ಕೆಲ ಮಸೂದೆಗಳಿಗೆ ಸಹಿ ಮಾಡದೆ ಉಳಿಸಿಕೊಂಡಿರುವ ಕ್ರಮವನ್ನು ಮತ್ತೊಮ್ಮೆ ತೀವ್ರ ತರಾಟೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್‌, ‘ಮೂರು ವರ್ಷದಿಂದ ರಾಜ್ಯಪಾಲರು ಏನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದೆ.

ರಾಜ್ಯಪಾಲರು ಮಸೂದೆಗಳಿಗೆ ಸಹಿ ಮಾಡುವುದಕ್ಕೆ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಬಳಿಕ ಇತ್ತೀಚೆಗಷ್ಟೇ ಹತ್ತು ಮಸೂದೆಗಳನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದರು. ಸಿಟ್ಟಿಗೆದ್ದ ತಮಿಳುನಾಡು ಸರ್ಕಾರ ಶನಿವಾರ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸಿ ಎಲ್ಲಾ ಹತ್ತು ಮಸೂದೆಗಳನ್ನು ಮರು ಅಂಗೀಕಾರ ಮಾಡಿ ರಾಜ್ಯಪಾಲರಿಗೆ ಕಳುಹಿಸಿತ್ತು.

ಇದನ್ನು ಓದಿ: ಕೇಂದ್ರಕ್ಕೆ ಇಂದು ಸುಪ್ರೀಂ ಪರೀಕ್ಷೆ: ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆ

ಈ ನಡುವೆ, ಸೋಮವಾರ ತಮಿಳುನಾಡಿನ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ‘ಈ ಮಸೂದೆಗಳು 2020ರಿಂದ ಬಾಕಿಯಿವೆ. 3 ವರ್ಷದಿಂದ ರಾಜ್ಯಪಾಲರು ಏನು ಮಾಡುತ್ತಿದ್ದರು? ವಿಧಾನಸಭೆ ಮತ್ತೆ ಈ ಮಸೂದೆಗಳನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದೆ. ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ’ ಎಂದು ಕಟುವಾಗಿ ಹೇಳಿತು.

ಇದೇ ವೇಳೆ, ಪಂಜಾಬ್‌ ಹಾಗೂ ಕೇರಳ ಸರ್ಕಾರಗಳು ತಮ್ಮ ರಾಜ್ಯಪಾಲರ ವಿರುದ್ಧ ಸಲ್ಲಿಸಿರುವ ಇದೇ ರೀತಿಯ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ‘ರಾಜ್ಯಪಾಲರು ಮಸೂದೆಗಳಿಗೆ ಸಹಿ ಹಾಕದೆ, ಮರಳಿ ವಿಧಾನಸಭೆಗೂ ಕಳುಹಿಸದೆ ಹಾಗೇ ಬಾಕಿ ಇರಿಸಿಕೊಳ್ಳಬಹುದೇ’ ಎಂದು ಪ್ರಶ್ನಿಸಿತು.

ಇದನ್ನೂ ಓದಿ: ರಾಜ್ಯಪಾಲರು ರಾಜಕೀಯ ಮಾತನಾಡಬಾರದು: ತಮಿಳುನಾಡು ಗವರ್ನರ್‌ ವಿರುದ್ಧ ಅಣ್ಣಾಮಲೈ ಕಿಡಿ

ಕೇಂದ್ರ, ಕೇರಳ ಗೌರ್ನರ್‌ಗೆ ನೋಟಿಸ್‌:
ಈ ನಡುವೆ, ‘ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು, ಕೇರಳ ವಿಧಾನಸಭೆ ಅಂಗೀಕರಿಸಿರುವ ಹಲವಾರು ಮಸೂದೆಗಳಿಗೆ ಸಹಿ ಹಾಕದೆ ದೀರ್ಘಕಾಲದಿಂದ ಬಾಕಿಯುಳಿಸಿಕೊಂಡಿದ್ದಾರೆ’ ಎಂಬ ಕೇರಳ ಸರ್ಕಾರದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಈ ಕುರಿತು ಪ್ರತಿಕ್ರಿಯೆ ಕೇಳಿ ಕೇಂದ್ರ ಸರ್ಕಾರ ಹಾಗೂ ಕೇರಳ ರಾಜ್ಯಪಾಲರ ಕಚೇರಿಗೆ ನೋಟಿಸ್‌ ಜಾರಿಗೊಳಿಸಿತು.

ಇದನ್ನೂ ಓದಿ: ತಮಿಳ್ನಾಡಲ್ಲಿ ಸರ್ಕಾರ vs ಗೌರ್ನರ್‌: ಸರ್ಕಾರ ಬರೆದುಕೊಟ್ಟ ಭಾಷಣ ಓದದ ರಾಜ್ಯಪಾಲರ ವಿರುದ್ಧ ನಿರ್ಣಯ..!

Follow Us:
Download App:
  • android
  • ios