Asianet Suvarna News Asianet Suvarna News

ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?: ಕೇಂದ್ರ ಸಚಿವ ರಾಣೆ

ಜ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರಾಗುವ ಶಂಕರಾಚಾರ್ಯರ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ‘ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ.

What was Shankaracharyas contribution to Hinduism Union Minister Narayan Rane akb
Author
First Published Jan 15, 2024, 7:00 AM IST

ಮುಂಬೈ: ಜ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರಾಗುವ ಶಂಕರಾಚಾರ್ಯರ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ‘ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ, ‘ಕಾರ್ಯಕ್ರಮ ಬಹಿಷ್ಕರಿಸುವುದು ಬಿಟ್ಟು ಶಂಕರಾಚಾರ್ಯರು ಕಾರ್ಯಕ್ರಮಕ್ಕೆ ಹಾಜರಾಗಿ ಆಶೀರ್ವದಿಸಬೇಕು. ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ರಾಜಕೀಯ ದೃಷ್ಟಿಕೋನದಿಂದ ನೋಡುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ಮುಂದಾಗುವವರೆಗೂ ಯಾರೂ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಹೀಗಿರುವಾಗ ಅವರು ಪ್ರಾಣಪ್ರತಿಷ್ಠಾಪನೆಯನ್ನು ಬಹಿಷ್ಕರಿಸಬೇಕೇ? ಅಥವಾ ಹರಸಬೇಕೇ? ರಾಮಮಂದಿರವನ್ನು ಧಾರ್ಮಿಕ ಕಾರಣಕ್ಕಾಗಿ ನಿರ್ಮಿಸಲಾಗಿದೆಯೇ ಹೊರತು ರಾಜಕೀಯ ಕಾರಣಕ್ಕಲ್ಲ. ರಾಮ ನಮ್ಮ ದೇವತೆ. ಅಷ್ಟಕ್ಕೂ ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನೆಂಬುದನ್ನು ಅವರೇ ತಿಳಿಸಬೇಕು’ ಎಂದು ಹೇಳಿದರು.

ವಿಪಕ್ಷಗಳು ಗರಂ:

ರಾಣೆ ಹೇಳಿಕೆ ಹಿಂದೂ ಧರ್ಮಕ್ಕೆ ಮಾಡಿದ ಅವಮಾನ ಎಂದು ಟೀಕಿಸಿರುವ ಶಿವಸೇನೆ (ಉದ್ಧವ್‌ ಬಣ) ನಾಯಕ ಸಂಜಯ್‌ ರಾವುತ್‌, ಜ.22ಕ್ಕೂ ಮುನ್ನ ಬಿಜೆಪಿ ಈ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕು ಮತ್ತು ಪ್ರಧಾನಿ ಮೋದಿ ಅವರು ರಾಣೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ. ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಕೂಡಾ ರಾಣೆ ಹೇಳಿಕೆ ಕುರಿತು ಬಿಜೆಪಿ ಸ್ಷಪ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ನಾಯಕನ ಅಚ್ಚರಿ ನಿರ್ಧಾರ, ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ!

ರಾಮಮಂದಿರ ಅಪೂರ್ಣವಾಗಿರುವ ಕಾರಣ, ಅದರ ಪ್ರಾಣಪ್ರತಿಷ್ಠಾಪನೆಯಲ್ಲಿ ತಾವು ಭಾಗಿಯಾಗುತ್ತಿಲ್ಲ ಎಂದು ಇತ್ತೀಚೆಗೆ ಬದರಿನಾಥ ಮತ್ತು ಪುರಿಯ ಶಂಕರಾಚಾರ್ಯರು ಹೇಳಿದ್ದರು. ಆದರೆ ಶೃಂಗೇರಿ ಮತ್ತು ದ್ವಾರಕಾ ಶ್ರೀಗಳು ಪ್ರಾಣಪ್ರತಿಷ್ಠಾಪನೆಯನ್ನು ಸ್ವಾಗತಿಸಿದ್ದರು. ಆದರೆ ಅನ್ಯ ಕಾರ್ಯಕ್ರಮ ಇರುವ ಕಾರಣ ಪ್ರಾಣಪ್ರತಿಷ್ಠೆಗೆ ಗೈರಾಗುವುದಾಗಿ ಹೇಳಿದ್ದರು.

ಯೋಗಿಗೆ ಚಪ್ಪಲಿಯಲ್ಲಿ ಹೊಡೀಬೇಕು ಎಂದಿ​ದ್ದ ಠಾಕ್ರೆ ಹಳೇ ವಿಡಿಯೋ ಈಗ ವೈರ​ಲ್‌!

Follow Us:
Download App:
  • android
  • ios